ತಂದೆಗಾಗಿ ಕ್ಷೇತ್ರದ ತ್ಯಾಗಕ್ಕೆ ಸಿದ್ದರಾದ ಶಾಸಕ ಯತೀಂದ್ರ ಸಿದ್ದರಾಮಯ್ಯ.

ಮೈಸೂರು,ಜುಲೈ,4,2022(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂಬ ಕುತೂಹಲ ಉಂಟಾಗಿದ್ದು ಈ ಮಧ್ಯೆ ತಂದೆಗಾಗಿ ವರುಣಾ ಕ್ಷೇತ್ರ ಬಿಟ್ಟುಕೊಡಲು ಶಾಸಕ ಯತೀಂದ್ರ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಯತೀಂದ್ರ ಸಿದ್ಧರಾಮಯ್ಯ, ವಿಪಕ್ಷ ನಾಯಕ ಸಿದ್ದರಾಮಯ್ಯಗಾಗಿ ವರುಣಾ ಕ್ಷೇತ್ರ ಬಿಟ್ಟುಕೊಡುತ್ತೇನೆ. ಜನ, ಪಕ್ಷ ಅಪೇಕ್ಷಿಸಿದರೆ ಸಿದ್ದರಾಮಯ್ಯ ವರುಣಾದಲ್ಲೆ ಸ್ಪರ್ಧೆ ಮಾಡಲಿ. ನಾನು ಅವರ ಬೆಂಬಲಕ್ಕೆ ನಿಂತು ಅವರ ಗೆಲುವಿಗೆ ಶ್ರಮಿಸುತ್ತೇನೆ. ನಾನು ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಸಿದ್ದರಾಮಯ್ಯ ಗೆಲ್ಲಿಸುವ ಕೆಲಸ ಮಾಡುತ್ತೇನೆ. ಅದು ನನ್ನ ಕರ್ತವ್ಯ. ಸಿದ್ದರಾಮಯ್ಯ ವರುಣಾಗೆ ಬಂದ ತಕ್ಷಣ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಸುಳ್ಳು ‌ಆ ತರದ ಯಾವ ಚಿಂತನೆಯನ್ನು ನಾನು ಮಾಡಿಲ್ಲ. ಕ್ಷೇತ್ರದ ಆಯ್ಕೆ ವಿಚಾರಕ್ಕೆ ಇನ್ನೂ ಬಹಳಷ್ಟು ಸಮಯ ಇದೆ. ಬಹಳಷ್ಟು ಕ್ಷೇತ್ರಗಳಿಂದ ಸಿದ್ದರಾಮಯ್ಯಗೆ ಆಹ್ವಾನ ಇದೆ. ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಅಳೆದು ತೂಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಕ್ಷೇತ್ರದ ಆಯ್ಕೆ ಚರ್ಚೆ ತುರ್ತು ಈಗ ಏನು ಇಲ್ಲ ಎಂದರು.

ಸಿದ್ದರಾಮೋತ್ಸವ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ ಯತೀಂದ್ರ ಸಿದ್ಧರಾಮಯ್ಯ, ಇದು ಶಕ್ತಿ ಪ್ರದರ್ಶನ ಅಲ್ಲ. ಇದು ಕೇವಲ ತಂದೆಯ ಹುಟ್ಟುಹಬ್ಬದ ಅಮೃತ ಮಹೋತ್ಸವ ಅಷ್ಟೇ.ಇದರಲ್ಲಿ ರಾಜಕೀಯ ಹುಡಕಬೇಡಿ.ಕಾಕತಾಳೀಯವಾಗಿ ಚುನಾವಣೆಯ ವರ್ಷವೇ ಅವರ ಅಮೃತ ಮಹೋತ್ಸವ ಬಂದಿದೆ. ಈಗಾಗಿ ಈ ವಿಚಾರ ಚರ್ಚೆಯಾಗುತ್ತಿದೆ.ಎಲ್ಲಾ ಪಕ್ಷದವರನ್ನೂ ಸೇರಿಸಿಕೊಂಡು ಅಮೃತ ಮಹೋತ್ಸವ ಆಚರಿಸಿದರೆ ರಾಜಕೀಯವಾಗಿ ಬೇರೆ ರೀತಿಯ ಚರ್ಚೆಗಳು ಆಗುತ್ತೆ.ಈಗಾಗಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಈ ಸಮಾರಂಭ ಆಯೋಜಿಸುತ್ತಿದ್ದೇವೆ ಎಂದರು.

ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳುವ ಪ್ರಶ್ನೆಯೇ ಇದರಲ್ಲಿ ಇಲ್ಲ. ಪಕ್ಷಕ್ಕೆ ಮೊದಲು ಬಹುಮತ ಬರಬೇಕು.ನಂತರ ಶಾಸಕರು, ಶಾಸಕಾಂಗದ ನಾಯಕನನ್ನು ಆಯ್ಕೆ ಮಾಡಬೇಕು. ಹೈಕಮಾಂಡ್ ತನ್ನ ನಿಲುವು ತಿಳಿಸಬೇಕು ಅಂತವರು ಸಿಎಂ ಅಗುತ್ತಾರೆ.ಈಗಲೇ ಅದನ್ನು ಬಿಂಬಿಸಿಕೊಳ್ಳುವ ಅಗತ್ಯ ಯಾರಿಗೂ ಇಲ್ಲ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ vs ಕಾಂಗ್ರೆಸ್ ಕ್ರೆಡಿಟ್ ವಾರ್ ವಿಚಾರ ಕುರಿತು ಮಾತನಾಡಿದ ಯತೀಂದ್ರ ಸಿದ‍್ಧರಾಮಯ್ಯ,  ಪ್ರತಾಪಸಿಂಹ ಅವರು ಮೈಸೂರಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಅಂತಾ ಪ್ರಶ್ನಿಸಿದ್ದರು.ಅದೇ ಕಾರಣಕ್ಕೇ ಈ ರೀತಿಯ ವಾತಾವರಣ ನಿರ್ಮಾಣವಾಗಿದೆ ಪ್ರತಾಪಸಿಂಹ ಏನು ಮಹಾರಾಜರಾ ? ದೊಡ್ಡ ನಾಯಕರೇ ಬೇಕು ಸಿದ್ದರಾಮಯ್ಯ ಬರಬೇಕು ಅನ್ನೋಕೆ ? ಕೆಲಸ ಮಾಡಿದ್ದರೆ ಯಾರೇ ಕರೆದರೂ ಚರ್ಚೆಗೆ ಬರಬೇಕು ಎಂದು ವಾಗ್ದಾಳಿ ನಡೆಸಿದರು.

Key words: MLA-Yathindra Siddaramaiah-ready -varuna-constituency – father