ಕಾಂಗ್ರೆಸ್ ನವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ: ರಣದೀಪ್ ಸಿಂಗ್ ಸುರ್ಜೇವಾಲಗೆ ಹೆಚ್.ಡಿಕೆ ತಿರುಗೇಟು.

Promotion

ಶಿವಮೊಗ್ಗ,ಫೆಬ್ರವರಿ,22,2023(www.justkannada.in):  ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂದು ಹೇಳಿಕೆ ನೀಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್  ಸುರ್ಜೆವಾಲಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂದು ಹೇಳಿದ ಸುರ್ಜೆವಾಲಗೆ ನಾಚಿಕೆ ಆಗಬೇಕು. ಜೆಡಿಎಸ್ ಅವಹೇಳನ ಮಾಡಿದಷ್ಟು ಕಾಂಗ್ರೆಸ್‌ ನೆಲಕ್ಕಚ್ಚುತ್ತದೆ. ಕಾಂಗ್ರೆಸ್ ಪಕ್ಷದವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ ಎಂದು ಕಿಡಿಕಾರಿದರು.

ಈಗ ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ. ಅಪರೇಷನ್ ಕಮಲದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟು ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಇದೇ ವೇಳೆ ಸಿಎಂ ಬೊಮ್ಮಾಯಿ ವಿರುದ್ದವೂ ವಾಗ್ದಾಳಿ ನಡೆಸಿದ ಹೆಚ್.ಡಿಕೆ, ಸರ್ಕಾರಿ ನೌಕರರಿಂದ ಸನ್ಮಾನ ಮಾಡಿಸಿಕೊಂಡು ಸಿಎಂ ಕೈಕೊಟ್ಟಿದ್ದಾರೆ. ಸರ್ಕಾರಿ ನೌಕರರು ಅರ್ಥ ಮಾಡಿಕೊಳ್ಳಲಿ. ಯಾರು ಪ್ರಾಮಾಣಿಕರು ಯಾರು ಸುಳ್ಳು ಹೇಳ್ತಾರೆ ನಿರ್ಧಾರ ಮಾಡಿ ಎಂದರು.

Key words: Modi – Congress-Randeep Singh Surjewala- H.D Kumaraswamy