ರಾಷ್ಟ್ರಕ್ಕೆ ಮೋದಿ, ರಾಜ್ಯಕ್ಕೆ ಹೆಚ್.ಡಿ ಕುಮಾರಸ್ವಾಮಿ: ಇದನ್ನ ಬದಲಿಸಲು ಸಾಧ್ಯವಿಲ್ಲ – ಸಚಿವ ಜಿ.ಟಿ ದೇವೇಗೌಡ ಹೇಳಿಕೆ…

Promotion

ಮೈಸೂರು,ಜು,3,2019(www.justkannada.in): ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಇದನ್ನ ಯಾರೂ ಬದಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಹೇಳಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಐದು ವರ್ಷ ಅಧಿಕಾರ ನಡೆಸುತ್ತಾರೆ. ರಾಜ್ಯದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಾಲ್ಕು ವರ್ಷ ಅಧಿಕಾರ ನಡೆಸುತ್ತಾರೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ತೊಂದರೆ ಇಲ್ಲ ಎಂದರು.

ಹಾಗೆಯೇ  ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಜಿ.ಟಿ ದೇವೇಗೌಡ, ನಾನು ನಿನ್ನೆ ನೀಡಿದ್ದ  ಹೇಳಿಕೆಗೆ ಈಗಲೂ ಬದ್ಧ ಮುಂದೆಯೂ ಬದ್ಧ. ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಿಲ್ಲ. ಮೋದಿ ಅವರು ಮತ್ತೆ ಪ್ರಧಾನಿಯಾದ ಮೇಲೆ ಅದು ನಿಂತಿದೆ. ಸಮ್ಮಿಶ್ರ ಸರ್ಕಾರ ರಚನೆ ಆದಾಗ ಅವರು ಅಪರೇಷನ್ ಕಮಲಕ್ಕೆ ಯತ್ನಿಸಿದ್ದರು. ಆದರೆ ಈಗ ಅದು ಇಲ್ಲ ಎಂದು ತಿಳಿಸಿದರು.

Key words: Modi – nation- HD Kumaraswamy – state-Minister- G, T Deve Gowda.