ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ಟಿ-20 ಪಂದ್ಯಕ್ಕೆ ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಕೆಟ್ ಮಾರಾಟ

ಬೆಂಗಳೂರು, ಸೆಪ್ಟೆಂಬರ್ 14, 2019 (www.justkannada.in): ಸೆ. 22 ರಂದು ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವೆ ಮೂರನೇ ಟಿ-20 ಪಂದ್ಯ ನಡೆಯಲಿದೆ.

ಇನ್ನು ಮೊದಲ ಟೆಸ್ಟ್​​ ಅಕ್ಟೋಬರ್ 2 ರಿಂದ ವಿಶಾಖಪಟ್ಟಣಂ ನಲ್ಲಿ ಆರಂಭವಾಗಲಿದೆ. 2ನೇ ಟೆಸ್ಟ್​ ಅ. 10 ರಂದು ಪುಣೆಯಲ್ಲಿ ಹಾಗೂ ಮೂರನೇ ಟೆಸ್ಟ್​ ಅ. 19 ರಂದು ರಾಂಚಿಯಲ್ಲಿ ನಡೆಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದರ ಟಿಕೆಟ್​​ ಮಾರಾಟ ಶುಕ್ರವಾರ ವೆಬ್​ಸೈಟ್​ನಲ್ಲಿ ಆರಂಭವಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಕಟಣೆ ಹೊರಡಿಸಿದೆ.

ಸೆ. 16 ರಿಂದ ಕ್ರೀಡಾಂಗಣದ ಬಾಕ್ಸ್‌ ಆಫೀಸ್‌ನಲ್ಲಿ ಟಿಕೆಟ್‌ ಮಾರಾಟ ನಡೆಯಲಿದ್ದು, 500 ರೂ. ಟಿಕೆಟ್‌ಗಳು ಮಾತ್ರ ಮಾರಾಟ ಮಾಡಲಿದೆ.