ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳಿಂದ ದಾಳಿ ದಾಖಲೆ ಪರಿಶೀಲನೆ.

Promotion

ಬೆಂಗಳೂರು,ಸೆಪ್ಟಂಬರ್,27,2023(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಆರೋಪದ ಹಿನ್ನೆಲೆ  ಐಟಿ ಅಧಿಕಾರಗಳು ದಾಳಿ ನಡೆಸಿದ್ದಾರೆ. ಐಟಿಬಿಟಿಗೆ ಸೇರಿದ ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ದಾಳಿ ನಡೆಸಿದೆ. ಬಾಗಮನೆ ಟೆಕ್​​​ಪಾರ್ಕ್​ನ ಕೆಲ ಖಾಸಗಿ ಕಂಪನಿಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಸಿ.ವಿ.ರಾಮನ್ ನಗರ, ಹುಳಿಮಾವು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Key words: More than -10 places- Bangalore – IT -attack