ಡಾ.ಗೋವಿಂದರಾಜನ್ ಪದ್ಮನಾಭನ್, ಪ್ರಶಾಂತ್ ಪ್ರಕಾಶ್ ಅವರಿಗೆ ಮೈವಿವಿಯಿಂದ ಗೌರವ ಡಾಕ್ಟರೇಟ್

Promotion

ಮೈಸೂರು, ಸೆಪ್ಟೆಂಬರ್ 5, 2021 (www.justkannada.in): ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವದಲ್ಲಿ ಜೀವರಾಸಾಯನಶಾಸಜ್ಞ, ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ಗೌರವ ಪ್ರಾಧ್ಯಾಪಕರಾದ ಡಾ.ಗೋವಿಂದರಾಜನ್ ಪದ್ಮನಾಭನ್ ಹಾಗೂ ವಿಷನ್ ಗ್ರೂಪ್ ಆನ್ ಸ್ಟಾರ್ಟ್ ಅಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್‌ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.

ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.7ರಂದು ಕ್ರಾರ್ಡ್ ಹಾಲ್ ಸಭಾಂಗಣದಲ್ಲಿ ನಡೆಯುವ 101ನೇ ಘಟಿಕೋತ್ಸವದಲ್ಲಿ ಈ ಇಬ್ಬರನ್ನು ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ಡಾ.ಗೋವಿಂದರಾಜನ್ ಪದ್ಮನಾಭನ್ ತಮಿಳುನಾಡು ಮೂಲದರಾದರೂ ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಸಾಕಷ್ಟು ವರ್ಷ ಸೇವೆ ಸಲ್ಲಿಸಿದ್ದಾರೆ. ಅಕ್ಸೆಲ್ ಪಾರ್ಟನರ್‌ನ ಸಂಸ್ಥಾಪಕರಾದ ಪ್ರಶಾಂತ್ ಪ್ರಕಾಶ್ ಅವರು ಸಾಕಷ್ಟು ಸಾಮಾಜಿಕ ಕೆಲಸದಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದು, ಕೋವಿಡ್ ಸಮಯದಲ್ಲಿ ಹಾಡಿಗಳ ನಿವಾಸಿಗಳಿಗೂ ಉಚಿತ ಲಸಿಕೆ ಹಾಕಿಸಲು ಶ್ರಮಿಸಿದ್ದರು ಎಂದು ಮಾಹಿತಿ ನೀಡಿದರು.
ಕುಲಸಚಿವ ಪ್ರೊಘಿ.ಆರ್.ಶಿವಪ್ಪ, ಕುಲಸಚಿವ (ಪರೀಕ್ಷಾಂಗ) ಪ್ರೊಘಿ.ಎ.ಪಿ.ಜ್ಞಾನಪ್ರಕಾಶ್ ಇದ್ದರು.

MoU honorable doctorate for Dr. Govindarajan Padmanabhan, Prashanth Prakash