2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ವಾ ಸಂಸದ ಡಿ.ಕೆ ಸುರೇಶ್..?

Promotion

ಬೆಂಗಳೂರು,ಜೂನ್,8,2023(www.justkannada.in):   2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸ್ಪರ್ಧಿಸುತ್ತಾರೆಯೇ ಇಲ್ಲವೇ..? ಅಥವಾ ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ  ಎಂಬ  ಪ್ರಶ್ನೆ ಎದುರಾಗಿದೆ.

ಹೌದು ಸಂಸದ ಡಿ.ಕೆ ಸುರೇಶ್ ಅವರೇ ಹೇಳಿಕೆಯೇ ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿದೆ .  ಮತದಾರರ ಅಭಿನಂದನಾ ಸಮಾರಂಭವೊಂದರಲ್ಲಿ ಮಾತನಾಡಿರುವ ಸಂಸದ ಡಿ.ಕೆ ಸುರೇಶ್, ಕೆಲವರು ನನ್ನ ಮುಂದಿನ ಸ್ಪರ್ಧೆ ಬಗ್ಗೆ ಮಾತಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಅಂತಾ ಗೊಂದಲದಲ್ಲಿದ್ದೇನೆ ಎಂದಿದ್ದಾರೆ.

ರಾಜಕಾರಣದಲ್ಲಿ ಇರಬೇಕೋ ಬೇಡವೋ ಅಂತಾ ಗೊಂದಲದಲ್ಲಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವೆ. ನನ್ನ ಗುರಿ ಇರೋದು ನಿಮ್ಮಗಳ ಸೇವೆ ಮಾಡೋದು. ಕುಣಿಗಲ್ ತಾಲೂಕನ್ನು ಮಾದರಿ ತಾಲೂಕು ಮಾಡುವುದು ನನ್ನ ಗುರಿ ಎಂದು ಡಿ.ಕೆ ಸುರೇಶ್ ತಿಳಿಸಿದ್ದಾರೆ.

Key words: MP -DK Suresh -contest – 2024 Lok Sabha- elections?