ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ  ಹೆಸರು ಬದಲಾವಣೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಸಮರ್ಥನೆ.

Promotion

ಮೈಸೂರು,ಸೆಪ್ಟಂಬರ್,8,2021(www.justkannada.in):  ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ  ಹೆಸರು ಬದಲಾವಣೆಗೆ ಈಗಾಗಲೇ ಆಗ್ರಹಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇದೀಗ ಮತ್ತೆ ಈ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.

ರಾಜೀವ್ ಗಾಂಧಿಗೂ ರಾಷ್ಟ್ರೀಯ ಉದ್ಯಾನವನಕ್ಕೂ ಏನು ಸಂಬಂಧ..? ಸಂಬಂಧ ಇಲ್ಲದವರ ಹೆಸರನ್ನ ಇಡಲಾಗಿದೆ. ಹೀಗಾಗಿ ರಾಷ್ಟ್ರೀಯ ಉದ್ಯಾನವನದ ಹೆಸರು ಬದಲಾವಣೆಗೆ ಮುಂದಾಗಿದ್ದೇವೆ. ಕಾಂಗ್ರೆಸ್ ನವರಂತೆ ನಾವು ನಮ್ಮ ಪಕ್ಷದ ಹೆಸರನ್ನ ಇಡುವುದಿಲ್ಲ.  ನಾವು ಯಾರನ್ನೂ ಓಲೈಸಲು ಹೆಸರು ಬದಲಾವಣೆ ಮಾಡುತ್ತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನಕ್ಕೆ ಫಿಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರು ಇಡುವಂತೆ ಸಂಸದ ಪ್ರತಾಪ್ ಸಿಂಹ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.

Key words: MP- Pratap simha- defends- Rajiv Gandhi -National Park- name -change