ವೈರಲ್ ಆಗ್ತಿದೆ ಶಾಸಕ ಎಂ.ಪಿ.ರೇಣುಕಾಚಾರ್ಯ ಆಣೆ-ಪ್ರಮಾಣದ ವಿಡೀಯೋ!

Promotion

ಬೆಂಗಳೂರು, ಜನವರಿ 02, 2021 (www.justkannada.in): ಚುನಾವಣೆ ಸಮಯದಲ್ಲಿ ನಡೆದಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂದಿನ ಚುನಾವಣೆಯಲ್ಲಿ ವೋಟ್ ನನಗೆ ಹಾಕಬೇಕು ಎಂದು ಕೋವಿಡ್ ಸಂತ್ರಸ್ತ ಕುಟುಂಬದವರನ್ನು ಮನೆಗೆ ಕರೆಸಿ, ಆಣೆ ಪ್ರಮಾಣ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾದ ವಿಡೀಯೋ ಚರ್ಚೆಗೆ ಗ್ರಾಸವಾಗಿದೆ.

ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಾಗಲೇ ಆಣೆ ಪ್ರಮಾಣ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾದ ಆರೋಪ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಂಡಿದೆ.

ವಿಡೀಯೋದಲ್ಲಿ ಏನಿದೆ?: ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ 1 ಲಕ್ಷ ಪರಿಹಾರ ನೀಡುತ್ತಿದೆ. ನಾನು ವೈಯಕ್ತಿಕವಾಗಿ 10 ಸಾವಿರ ಹಣ ನೀಡುತ್ತೇನೆ. ಮುಂದಿನ ಚುನಾವಣೆಯಲ್ಲಿ ವೋಟ್ ನನಗೆ ಹಾಕಬೇಕು ಎಂದು ಕೋವಿಡ್ ಸಂತ್ರಸ್ತರಿಂದ ಪ್ರಮಾಣ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.