ಸಿಎಂ ಬಿಎಸ್ ವೈ ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದೆ ಸುಮಲತಾ ಅಂಬರೀಶ್.

ಬೆಂಗಳೂರು,ಜುಲೈ,5,2021(www.justkannada.in):   ಬೆಳಿಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ  ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದಾರೆ.jk

ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕು ಹಾಗೂ ಮನ್ಮುಲ್ ನಲ್ಲಿನ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಿಎಂ ಭೇಟಿಯಾಗಿ ಕುಮಾರಸ್ವಾಮಿ ಮನವಿ ಮಾಡಿದ್ದರು.  ಬಳಿಕ ಮಾಧ್ಯಮಗಳ ಜತೆ ಮಾತನಾಡಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಬೆನ್ನಲೆ ಇದೀಗ ಸಂಸದೆ ಸುಮಲತಾ  ಅಂಬರೀಶ್ ಸಿಎಂ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಭೇಟಿಯಾದ ಬಳಿಕ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಸಿಎಂ ಆಗಿ ಜಿಲ್ಲೆಗೆ ಬಂದಾಗ ಕೊಟ್ಟ ಮಾತನ್ನ ನೆನಪಿಸಿದ್ದೇನೆ. ಕೆಆರ್ ಎಸ್ ಸುತ್ತಾಮುತ್ತಾ  ಗಣಿಗಾರಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ. ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.

ಹೆಚ್.ಡಿ ಕುಮಾರಸ್ವಾಮಿ ಸಮರ್ಥಿಸಿಕೊಳ್ಳುವ ಮಾತು ಬೇಡ. ಮೊದಲು ಹೆಚ್ ಡಿ ಕುಮಾರಸ್ವಾಮಿ ಕ್ಷಮೆಯಾಚಿಸಲಿ ಎಂದು ಸುಮಲತಾ ಅಂಬರೀಶ್ ಆಗ್ರಹಿಸಿದರು.

Key words: MP -Sumalatha Ambarish- -meet-CM BS yeddyurappa