700 ರೈತರ ಸಾವಿಗೆ ಮಿಸ್ಟರ್ ಮೋದಿ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಳಗಾವಿ,ಡಿಸೆಂಬರ್,5,2021(www.justkannada.in):  ಕೃಷಿ ಕಾಯ್ದೆ ಹಿಂಪಡೆಯುವಂತೆ ರೈತರು ನಡೆಸಿದ ಹೋರಾಟದಲ್ಲಿ 700 ರೈತರ ಸಾವಿಗೆ ಮಿಸ್ಟರ್ ಮೋದಿ ಕಾರಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದರು.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಹೋರಾಟದಲ್ಲಿ ರೈತರ ಸಾವಿಗೆ ಕಾರಣ ಮೋದಿ. ಬಿಜೆಪಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಯಾಕೆ ಅವರಿಗೆ ವೋಟ್ ಹಾಕಬೇಕು. ಬಿಜೆಪಿಯವರು ಅಧಿಕಾರಕ್ಕೆ ಬಂದು ಎರಡುವರೆ ವರ್ಷವಾಗಿದೆ. ಆದರೆ ಅವರು ಏನಾದ್ರೂ ಕೆಲಸ ಮಾಡಿದ್ದಾರಾ..?  ನನ್ನ ಅವಧಿಯಲ್ಲಿ ವರ್ಷಕ್ಕೆ 3 ಲಕ್ಷ ಮನೆ ಕಟ್ಟಿಸಿಕೊಟ್ಟಿದ್ದೇನೆ ಎಂದರು.

2023 ಕ್ಕೆ ಕಾಂಗ್ರಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ,   ನನ್ನ ಅವಧಿಯಲ್ಲಿ 7 ಕೆಜಿ ಕೊಡುತ್ತಿದೆ. ಈಗ ಬಿಜೆಪಿ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ ಜನ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರೈತರ ಸಾಲಮನ್ನಾ ಮಾಡಿದ್ದು ಮನ್ ಮೋಹನ್ ಸಿಂಗ್. ಈಗಿನ ಸರ್ಕಾರ ಚುನಾವಣೆಯಲ್ಲಿ ಸೋತ ಬಳಿಕ ಕೃಷಿ ಕಾಯ್ದೆ ವಾಪಸ್ ಪಡೆದಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿ ಆರ್ ಎಸ್ ಎಸ್ ನಿಂದ ಬಂದವರು. ಬಸವರಾಜ ಬೊಮ್ಮಾಯಿ ಆರ್ ಎಸ್ ಎಸ್ ನಿಂದ ಬಂದಿಲ್ಲ. ಲಾಟರಿ ಹೊಡೆದು ಸಿಎಂ ಆದರು.  ಈಗ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನದಿಂದ ಕಿತ್ತು ಹಾಕಲು ಸಚಿವ ಈಶ್ವರಪ್ಪ ಮಾತನಾಡುತ್ತಿದ್ದಾರೆ ಎಂದು ಸಿದ್ಧರಾಮಯ್ಯ ವ್ಯಂಗ್ಯವಾಡಿದರು.

Key words: Mr Modi – responsible – death -700 farmers- Former CM- Siddaramaiah.