ತಿರುಪತಿ ತಿಮ್ಮಪ್ಪನ ದೇಗುಲಕ್ಕೆ 1.5 ಕೋಟಿ ದೇಣಿಗೆ ನೀಡಿದ ಮುಕೇಶ್ ಅಂಬಾನಿ

Promotion

ಬೆಂಗಳೂರು, ಸೆಪ್ಟೆಂಬರ್ 18, 2022 (www.justkannada.in): ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು  ತಿರುಪತಿ ತಿಮ್ಮಪ್ಪನ ದೇಗುಲಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಅವರು 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಬಳಿಕ ಕೇರಳದ ಪ್ರಸಿದ್ಧ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು, ಅನ್ನದಾನಕ್ಕಾಗಿ 1.5 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಕೇಶ್ ಅಂಬಾನಿ ಅವರೊಂದಿಗೆ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಸಹ ಹಾಜರಿದ್ದರು.