ತುಳು ಚಿತ್ರ ನಟ, ರೌಡಿ ಶೀಟರ್‌ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ…

Promotion

ಮಂಗಳೂರು,ಅಕ್ಟೋಬರ್,21,2020(www.justkannada.in): ತುಳು ಚಿತ್ರ ನಟ, ರೌಡಿ ಶೀಟರ್‌ ಸುರೇಂದ್ರ ಬಂಟ್ವಾಳ್ ಅವರನ್ನು  ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ನಡೆದಿದೆ.jk-logo-justkannada-logo

ಬಿ.ಸಿ.ರೋಡ್ ಬಳಿಯ ಫ್ಲಾಟ್‌ನಲ್ಲಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೆಲ ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು. ಹಣಕಾಸು ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ಅವರನ್ನು ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಕಳೆದ 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು.murder-tulu-film-star-rowdy-sheeter-surendra-bantwal

ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬಂಟ್ವಾಳ್ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಸುರೇಂದ್ರ ಹೊರಬಂದಿದ್ದರು.

Key words: Murder – Tulu film star- rowdy sheeter -Surendra Bantwal