ಪಿಎಚ್ಡಿ ಸಂಶೋಧನೆ ಮಾಡಿ ಡಾಕ್ಟರೇಟ್ ಪಡೆದ ಸಂಗೀತ ನಿರ್ದೇಶಕ ವಿ.ನಾಗೇಂದ್ರ ಪ್ರಸಾದ್

kannada t-shirts

ಬೆಂಗಳೂರು, ಏಪ್ರಿಲ್ 10, 2021 (www.justkannada.in): 

ಗೀತಾ ರಚನೆಕಾರ, ಸಂಗೀತ ನಿರ್ದೇಶಕ ವಿ ನಾಗೇಂದ್ರ ಪ್ರಸಾದ್ ಮಂಡಿಸಿದ ಮಹಾಪ್ರಬಂಧಕ್ಕೆ  ಹಂಪಿ ಕನ್ನಡ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

‘ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು ಅಧ್ಯಯನ’ ಎಂಬ ವಿಷಯ ಕುರಿತು ಸಂಶೋಧನೆ ಅಧ್ಯಯನ ನಡೆಸಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರು.

ನಾಗೇಂದ್ರ ಪ್ರಸಾದ್ ಅವರ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ತನ್ನ 29ನೇ ಘಟಿಕೋತ್ಸವ (ನುಡಿಹಬ್ಬ)ದಲ್ಲಿ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್) ಪದವಿ ನೀಡಿದೆ.

ನಾಗೇಂದ್ರ ಪ್ರಸಾದ್ ಅವರು ವಿದ್ಯಾರ್ಥಿಯಂತೆ ಸಂಶೋಧನೆ ನಡೆಸಿ ಮಹಾಪ್ರಬಂಧ ರಚಿಸಿ ಅದಕ್ಕೆ ಬಳ್ಳಾರಿಯಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿರುವುದಕ್ಕೆಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

website developers in mysore