ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲೀಂರಿಗೆ ತೊಂದರೆಯಾಗಲ್ಲ: ಶಾಂತಿ ಸುವ್ಯವಸ್ಥೆ ಕಾಪಾಡಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ…

ಬೆಂಗಳೂರು,ಡಿ,19,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸಲ್ಮಾನರಿಗೆ ತೊಂದರೆಯಾಗುವುದಿಲ್ಲ.  ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನ ಕಾಪಾಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮದ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ದಾರಿ.  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದ ಯಾವುದೇ ನಾಗರೀಕರಿಗೆ ತೊಂದರೆಯಾಗುವುದಿಲ್ಲ. ಇವತ್ತಿನ ಪರಿಸ್ಥಿತಿ ಸದ್ಯ ಹತೋಟಿಯಲ್ಲಿದೆ. ಎಲ್ಲರೂ ಶಾಂತಿ ಸುವ್ಯವಸ್ಥೆಯನ್ನ ಕಾಪಾಡಬೇಕು. ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದರು.

ಕಾನೂನು ಮೀರಿ ಯಾರೂ ವರ್ತಿಸಬಾರದು. ಕಾನೂನು ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.  ಪ್ರತಿಭಟನೆಗೆ ನೀಡಿದ್ದ ಅನುಮತಿ ರದ್ದು ಮಾಡಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಇನ್ನು ನಿನ್ನೆ ಜಿಎಸ್ ಟಿ ಸಭೆಯಲ್ಲಿ ಹಲವು ವಿಚಾರ ಚರ್ಚೆಯಾಗಿದೆ. ಸಮಯಕ್ಕೆ ಸರಿಯಾಗಿ ಅನುದಾನ ನೀಡುವಂತೆ ಮನವಿ ಮಾಡಿದ್ಧೇನೆ. ನೆರೆ ಪರಿಹಾರ ಸಹ ನೀಡಬೇಕು ಎಂದು ಮನವಿ ಮಾಡಿದ್ದೇನೆ.  ಮಹದಾಯಿ ವಿವಾದ ಕುರಿತು ಗೋವಾ ಸಿಎಂ ತಾತ್ಕಾಲಿಕ ತಡೆ ತಂದಿದ್ದಾರೆ. ತಾತ್ಕಾಲಿಕ ತಡೆಯನ್ನ ತೆಗೆಸುತ್ತೇವೆ. ಕಾಂಗ್ರೆಸ್ ನಮ್ಮನ್ನ ವಿರೋಧಿಸುವ ನೈತಿಕತೆಯೇ ಇಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Muslims – not -bothered – Citizenship Amendment Act- Home Minister -Basavaraja Bommai.