Saturday, September 12, 2026

BDA Apartments

ಕರ್ನಾಟಕದಲ್ಲಿ ಯಾರೇ ಸಿಎಂ ಆದರೂ ನನ್ನ ಬೆಂಬಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜ...
Home Front Page ಕರ್ನಾಟಕದಲ್ಲಿ ಯಾರೇ ಸಿಎಂ ಆದರೂ ನನ್ನ ಬೆಂಬಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಯಾರೇ ಸಿಎಂ ಆದರೂ ನನ್ನ ಬೆಂಬಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಡಿಸೆಂಬರ್ 11, 2022 (www.justkannada.in): ನನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ ಎಂದು ಖರ್ಗೆ ಕಿವಿಮಾತು ಹೇಳಿದ್ದಾರೆ.

ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ.