ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಹಸು ಸಜೀವ ದಹನ: ಲಕ್ಷಾಂತರ ರೂ. ಮೌಲ್ಯದ ಆಸ್ತಿ ನಷ್ಟ…

Promotion

ಮೈಸೂರು,ಏಪ್ರಿಲ್,17,2021(www.justkannada.in): ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು ಹಸು ಸಜೀವ ದಹನವಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಪಿರಿಯಾಪಟ್ಟಣ ತಾಲೂಕಿನ  ಭುವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ‌ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಕೊಟ್ಟಿಗೆಯಲ್ಲಿ  ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಸು ಸೇರಿದಂತೆ ದವಸ ಧಾನ್ಯಗಳು ಬೆಂಕಿಗೆ ಆಹುತಿಯಾಗಿವೆ.myosre- Fire -short circuit-burning - cow

ಕೊಟ್ಟಿಗೆಯಲ್ಲಿದ್ದ ಇಟ್ಟಿದ್ದ 12 ಕ್ವಿಂಟಾಲ್ ಭತ್ತ, 250 ತೆಂಗಿನ ಕಾಯಿ ಸುಟ್ಟು ಭಸ್ಮವಾಗಿವೆ. ಈ ಮೂಲಕ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದ್ದು, ಸೂಕ್ತ ಪರಿಹಾರಕ್ಕಾಗಿ ರೈತ ಕುಟುಂಬ ಮನವಿ ಮಾಡಿದೆ. ಈ ಕುರಿತು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: myosre- Fire -short circuit-burning – cow