ಮೈಸೂರು ; 283 ಕೋಟಿ ರೂ. ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ನವೆಂಬರ್,9,2021(www.justkannada.in):  ಮೈಸೂರು ನಗರ ಮತ್ತು ಜಿಲ್ಲಾದ್ಯಂತ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಸಂಬಂಧ ಪರಿಹಾರ ಕಾಮಗಾರಿ ಕೈಗೊಳ್ಳಬೇಕಾಗಿರುವ 48 ಕಾಮಗಾರಿಗಳಿಗೆ 152.5 ಕೋಟಿ ರೂ. ಹಾಗೂ ಮೈಸೂರು ನಗರ ಒಳಚರಂಡಿ ಸುಧಾರಣೆ ಸಂಬಂಧ 35 ಕಾಮಗಾರಿಗೆ 130.85 ಕೋಟಿ ರೂ. ಸೇರಿದಂತೆ ಒಟ್ಟು 283.35 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಿ, ತುರ್ತಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮವಹಿಸುವಂತೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಮೈಸೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಕುರಿತು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನವೆಂಬರ್ 1ರಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿ, ಕೂಡಲೇ ತುರ್ತು ಪರಿಹಾರ ಕಾಮಗಾರಿಗೆ ಬೇಕಾದ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಮಳೆ ಹಾನಿ ಸಂಬಂಧ ತುರ್ತಾಗಿ ಕೈಗೊಳ್ಳಬೇಕಾಗಿರುವ 48 ಕಾಮಗಾರಿಗೆ 152.50 ಕೋಟಿಗೆ ಹಾಗೂ ಮೈಸೂರು ನಗರದಲ್ಲಿ ಒಳಚರಂಡಿ ತ್ಯಾಜ್ಯ ನೀರು ಮಳೆ ನೀರು ಚರಂಡಿಯಲ್ಲಿ ಹರಿಯುತ್ತಿರುವುದನ್ನು ತಪ್ಪಿಸಿ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಗೆ ಸಾಗಿಸಲು ಕೈಗೊಳ್ಳಬೇಕಾಗಿರುವ 35 ಕಾಮಗಾರಿಗೆ 130.35 ಕೋಟಿ ಅನುದಾನಕ್ಕೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ.

ಈ ಕಾಮಗಾರಿಗಳನ್ನು ತೆಗೆದುಕೊಳ್ಳಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರಿಗೆ ಕೋರಿದ್ದಾರೆ.

Key words: Mysore-283 crores- Minister-ST Somashekar – -demanded – Chief Minister- grant