ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ಈಗ ಎಲ್ಲಾ ದಿನವೂ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ…

ಮೈಸೂರು,ಆ,11,2020(www.justkannada.in):  ಕೊರೋನಾ ಹಾಗೂ ಲಾಕ್ ಡೌನ್ ಹಿನ್ನೆಲೆ ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧವನ್ನ ತೆರವುಗೊಳಿಸಿ ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಆದೇಶ ಹೊರಡಿಸಿದ್ದಾರೆ.mysore-amba-vilas-palace-open-public-all-day

ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ ಈಗ ಎಲ್ಲಾ ದಿನವೂ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಶನಿವಾರ, ಭಾನುವಾರ ಸೇರಿದಂತೆ ಸಾರ್ವತ್ರಿಕ ರಜಾ ದಿನಗಳೂ ಸೇರಿದಂತೆ ವಾರದ ಎಲ್ಲಾ ದಿನವೂ ಸಾರ್ವಜನಿಕ ವೀಕ್ಷಣೆಗೆ ಅರಮನೆ ಲಭ್ಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಸಾರ್ವಜನಿಕ ವೀಕ್ಷಣೆಗೆ  ಅವಕಾಶವಿದೆ ಎಂದು ತಿಳಿಸಿದ್ದಾರೆ.

ಇನ್ನು ಅರಮನೆ ಆವರಣದಲ್ಲಿ ನಡೆಯುತ್ತಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಜತೆಗೆ  ಪ್ರತಿ ಭಾನುವಾರದಂದು ನಡೆಯುತ್ತಿದ್ದ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯೂ ಸಹ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ರದ್ದು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.mysore- amba vilas- palace- Open -public - All day

ಕೊರೋನಾ ಹಾವಳಿ ಹಾಗೂ ಲಾಕ್ ಡೌನ್ ನಿಂದ ಕೆಲವು ನಿರ್ದಿಷ್ಟ ದಿನಗಳಂದು ಅರಮನೆ ವೀಕ್ಷಣೆಗೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಅರಮನೆ ವೀಕ್ಷಣೆಗಿದ್ದ ಎಲ್ಲಾ ನಿರ್ಬಂಧಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.

Key words: mysore- amba vilas- palace- Open -public – All day