ಮಾಸಿಕ ಗೌರವ ಧನ 12 ಸಾವಿರ ನಿಗದಿಪಡಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ…

ಮೈಸೂರು,ಜೂ,30,2020(www.justkannada.in): ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ 12 ಸಾವಿರ ನಿಗಧಿಪಡಿಸುವಂತೆ ಒತ್ತಾಯಿಸಿ  ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಆಶಾಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾದಂತಹ ಸಂದರ್ಭದಲ್ಲಿ ಪ್ರಾಣವನ್ನು ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಕೆಲಸ ನಿರ್ವಹಿಸಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ತಿಂಗಳಿಗೆ ಕೇವಲ ಒಂದೇ ಮಾಸ್ಕ್, ಒಂದೇ ಗ್ಲೌಸ್ ನೀಡಿದೆ. ರಕ್ಷಣಾ ಪರಿಕರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.mysore-asha-worker-protest-demand-monthly-payment-rs-12000

ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 4ಸಾವಿರ ಹಣ ನೀಡಲಾಗುತ್ತಿದೆ. ಆ ಪ್ರೋತ್ಸಾಹ ಧನವೂ ಸಿಗದೇ ಕೆಲಸ ನಿರ್ವಹಿಸುವಂತಾಗಿದೆ. ಈ ಬಗ್ಗೆ ಹಲವು ಬಾರಿ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲ. ಈ ಕೂಡಲೇ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು. ಅಗತ್ಯಕ್ಕೆ ತಕ್ಕಂತೆ ಆರೋಗ್ಯ ರಕ್ಷಣಾ ಸಾಮಾಗ್ರಿಗಳನ್ನು ನೀಡಬೇಕು. ಮಾಸಿಕ ಗೌರವಧನವನ್ನು 12 ಸಾವಿರ ನಿಗಧಿಪಡಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸುವುದಾಗಿ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Key words: mysore- Asha worker- Protest-demand- monthly -payment- Rs 12,000.