ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಜಾಥಾ:100ಕ್ಕೂ ಹೆಚ್ಚು ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳು ಭಾಗಿ…

kannada t-shirts

ಮೈಸೂರು,ಮಾ,3,2020(www.justkannada.in): ವಿಶ್ವ ಶ್ರವಣ ದಿನದ ಪ್ರಯುಕ್ತ ಮೈಸೂರಿನಲ್ಲಿ ಜಾಗೃತಿ ಜಾಥಾ ಆಯೋಜನೆ ಮಾಡಲಾಗಿತ್ತು.

ಮೈಸೂರಿನ ತಿಲಕ್ ನಗರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ ಜಾಗೃತಿ ಜಾಥಾಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಕೆ. ಪದ್ಮ ಅವರು ಚಾಲನೆ ನೀಡಿದರು.

ಶ್ರವಣದೋಷದ ನ್ಯೂನತೆ ಕುರಿತು ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ಆಯೋಜನೆ ಮಾಡಲಾಗಿತ್ತು. ಜಾಥದಲ್ಲಿ ತಿಲಕ್ ನಗರದ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ತರಬೇತಿ ಕೇಂದ್ರದ ಮಕ್ಕಳು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗಿಯಾಗಿದ್ದರು.  ತರಬೇತಿ ಕೇಂದ್ರದ ಉಪನಿರ್ದೇಶಕಿ ಮಂಜುಳ. ವಿ. ಪಾಟೀಲ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಮತ. ಡಿ. ಜೆ. ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Key words: mysore- Awareness Jatha – World Hearing Day.

website developers in mysore