ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು: ಇಬ್ಬರಿಗೆ ಗಂಭೀರ ಗಾಯ..

Promotion

ಮೈಸೂರು,ಸೆಪ್ಟಂಬರ್,19,2020(www.justkannada.in): ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk-logo-justkannada-logo

ಹುಣಸೂರು ತಾಲ್ಲೂಕು ಬಿಳಿಕೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಇಲವಾಲ ಗ್ರಾಮದ ರಾಮಚಂದ್ರ (22) ನವೀನ್ (24) ಮೃತಪಟ್ಟವರು. ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. mysore- bike-accident- two death-injured

ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಈ ಅಪಘಾತ ಸಂಭವಿಸಿದ್ದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- bike-accident- two death-injured