ಕೋವಿಡ್ ನಿಯಮ ಉಲ್ಲಂಘಿಸಿ ಮಕ್ಕಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಣೆ : ಕ್ರಮಕ್ಕೆ ಆಗ್ರಹಿಸಿದ ಆರ್ಟಿಐ ಕಾರ್ಯಕರ್ತ ರವೀಂದ್ರ.

kannada t-shirts

 

ಮೈಸೂರು, ಜೂ.21, 2021 : (www.justkannada.in news) : ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿನ ನಿಯಮಗಳನ್ನು ಗಾಳಿಗೆ ತೂರಿ ಮಕ್ಕಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಬಗ್ಗೆ ಸಾಮಾಜಿಕ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಜೂ.20 ರಂದು (ಬಾನುವಾರ) ಮದ್ಯಾಹ್ನ ಸುಮಾರು 1 ಗಂಟೆಗೆ ಸ್ಥಳೀಯ ಜನಪ್ರತಿನಿಧಿಗಳು ಲಾಕ್ ಡೌನ್ ನಿಯಮಗಳನ್ನ ಉಲ್ಲಂಘಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಮೈಸೂರಿನ ಹೂಟಗಳ್ಳಿಯಲ್ಲಿನ ಒಡನಾಡಿ ಸೇವಾ ಟ್ರಸ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ದೂರಿದ್ದಾರೆ.

jk

ಮೈಸೂರು ತಾಲೊಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಮಂಜುಳ ಮಂಜುನಾಥ್ ರ ಹುಟ್ಟು ಹಬ್ಬದ ಪ್ರಯುಕ್ತ ಒಡನಾಡಿ ಸೇವಾ ಟ್ರಸ್ಟ್ ಆವರಣದಲ್ಲಿ ಮಕ್ಕಳ ಜತೆಗೆ ಹುಟ್ಟು ಹಬ್ಬ ಆಚರಿಸಿಕೊಳ್ಳಲಾಗಿದೆ. ಈ ಸಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಾಗೂ ವಿಡಿಯೋ ಸಹ ಪೋಸ್ಟ್ ಮಾಡಲಾಗಿದೆ.

ಹುಟ್ಟುಹಬ್ಬ ಸಮಾರಂಭದಲ್ಲಿ ಭಾಗವಹಿಸಿದ್ದ ಬಹುತೇಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಈ ಫೋಟೋ, ವಿಡಿಯೋಗಳಲ್ಲಿ ಕಂಡು ಬಂದಿದೆ ಎಂದಿರುವ ಆರ್.ಟಿ.ಐ ಕಾರ್ಯಕರ್ತ ರವೀಂದ್ರ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕೊರೊನ 3 ನೇ ಅಲೆ ಮಕ್ಕಳಿಗೆ ಸಮಸ್ಯೆ ಒಡ್ಡಲಿದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡುತ್ತಾ ಬಂದಿದೆ. ಆದರೂ ಜನಪ್ರತಿನಿಧಿಗಳು ಜವಾಬ್ದಾರಿ ಮರೆತು ಈ ರೀತಿ ಹುಟ್ಟುಹಬ್ಬವನ್ನು ಮಕ್ಕಳ ಜತೆಗೆ ಆಚರಿಸಿಕೊಂಡಿರುವುದು ಅಪರಾಧ. ಆದ್ದರಿಂದ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಹಾಗೂ ಮಕ್ಕಳಿಗೆ ಅಗತ್ಯ ರಕ್ಷಣೆ ನೀಡಿ ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.

 

key words : mysore-birthday-celebration-RTI-activist-ravindra-odanadi-mysore

website developers in mysore