ತಾಯಿ ಚಾಮುಂಡೇಶ್ವರಿ ದೇಗುಲ ಮತ್ತು  ನಂಜುಂಡೇಶ್ವರ ದೇವಸ್ಥಾನ ಪ್ರವೇಶಕ್ಕೆ ನಿಯಮ ಸಡಿಲಿಕೆ: ಸಮಯ ನಿಗದಿ…

Promotion

ಮೈಸೂರು,ಸೆಪ್ಟಂಬರ್,5,2020(www.justkannada.in): ಮೈಸೂರಿನ ಚಾಮುಂಡಿ ಬೆಟ್ಟದ ತಾಯಿ ಚಾಮುಂಡೇಶ್ವರಿ ದೇಗುಲ ಮತ್ತು  ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಯಮ ಸಡಿಲಿಕೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಶನಿವಾರ ದಿನದಂದೂ ತಾಯಿ ಚಾಮುಂಡೇಶ್ವರಿ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಾಲಯ ಎರಡು ದೇವಾಲಯಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಂದು ಪ್ರವೇಶ ನಿರ್ಬಂಧ ಮುಂದುವರಿಯಲಿದೆ. mysore- chamindi hills- nanjanagudu temple- Rule-relaxation- entry-DC- B.Sharath

mysore- chamindi hills- nanjanagudu temple- Rule-relaxation- entry-DC- B.Sharath

ಉಳಿದ ದಿನಗಳಂದು ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಸಮಯ ಹೀಗಿದೆ ನೋಡಿ…

ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 6 ಗಂಟೆ, ರಾತ್ರಿ 7.30ರಿಂದ 8 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಶುಕ್ರವಾರ ಹಾಗೂ ಶನಿವಾರಗಳಲ್ಲಿ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ  ಮಧ್ಯಾಹ್ನ 3.30ರಿಂದ 6 ಗಂಟೆವರೆಗೆ ಮಾತ್ರ ಪ್ರವೇಶ. ಶುಕ್ರವಾರ ಶನಿವಾರ ರಾತ್ರಿ ದರ್ಶನಕ್ಕೆ‌ ನಿರ್ಬಂಧ ವಿಧಿಸಲಾಗಿದೆ.mysore- chamindi hills- nanjanagudu temple- Rule-relaxation- entry-DC- B.Sharath

ಇನ್ನು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 6 ಗಂಟೆಯಿಂದ 1 ಗಂಟೆ ಸಂಜೆ 4 ಗಂಟೆಯಿಂದ ರಾತ್ರಿ 8.30ರವೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಬಿ ಶರತ್ ಆದೇಶ ಹೊರಡಿಸಿದ್ದಾರೆ.

Key words: mysore- chamindi hills- nanjanagudu temple- Rule-relaxation- entry-DC- B.Sharath