ಪಾಲಿಕೆ ಬೈ ಎಲೆಕ್ಷನ್ ನಲ್ಲಿ ‘ಕೈ’ ಅಭ್ಯರ್ಥಿ ಗೆಲುವಿನ ಮೂಲಕ ಮೈಸೂರು ಕಾಂಗ್ರೆಸ್ ಭದ್ರಕೋಟೆ ಎಂಬುದು ಸಾಬೀತು- ಹೆಚ್.ಎ ವೆಂಕಟೇಶ್.

kannada t-shirts

ಮೈಸೂರು,ಸೆಪ್ಟಂಬರ್,6,2021(www.justkannada.in): ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಉಪಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯಗೆಲುವಿನ ಮೂಲಕ ಮೈಸೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಸಾಬೀತಾಗಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಸಂತಸ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿದ ಅವರು, ಈ ಉಪ ಚುನಾವಣೆಯಿಂದ ಬಿಜೆಪಿ-ಜೆಡಿಎಸ್ ಪಕ್ಷಗಳು ಸ್ಥಳೀಯವಾಗಿ ಜನರಿಂದ ತಿರಸ್ಕರಿಸಿರುವುದು ಸ್ಪಷ್ಟವಾಗಿದೆ. ಈ ಚುನಾವಣೆಯು ಹಲವಾರು ವಿಷಯಗಳಿಂದ ಮಹತ್ವ ಪಡೆದಿತ್ತು. ಬಿಜೆಪಿ ಮೈಸೂರು ನಗರಪಾಲಿಕೆಯ ಅಧಿಕಾರ ಹಿಡಿದಿದ್ದರು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಕಳೆದ ಬಾರಿ ಜೆಡಿಎಸ್ ಕ್ಷೇತ್ರ ಗೆದ್ದು ಮೇಯರ್ ಪದವಿ ಅನುಭವಿಸಿದರು.  ಕ್ಷೇತ್ರ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಕಳೆದ ಬಾರಿ ರಜಿನಿ ಅಣ್ಣಯ್ಯ ಅವರು  ಶಾಸಕರಾದ ತನ್ವೀರ್ ಶೇಠ್ ಹಾಗೂ ಎಂ.ಕೆ ಸೋಮಶೇಖರ್ ಅವರ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಕೆಲಸ ನಿರ್ವಹಿಸಿದ್ದರು. ಸಂಘಟಿತ ಹೋರಾಟ ನಡೆಸಿದರೆ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ನಗರದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ದಿಕ್ಸೂಚಿ ಎಂದೇ ಪರಿಗಣಿಸಬಹುದಾಗಿದೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ವಿಶೇಷವಾಗಿ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ನಾಯಕತ್ವಕ್ಕೆ ಜನ ಮನ್ನಣೆನೀಡಿದ್ದಾರೆ. ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ ಹಾಗೂ ಕಾರ್ಯಕರ್ತರ ಶ್ರಮ ಪ್ರಸಂಶನೀಯ ಎಂದು ಹೆಚ್.ಎ ವೆಂಕಟೇಶ್ ತಿಳಿಸಿದರು.

ಅಧಿಕಾರ ದುರ್ಬಳಕೆ

ರಾಜ್ಯದಲ್ಲಿ ನಡೆದ 3  ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರವಾಗಿದೆ, ಆದರೂ ಕೂಡ ಸ್ಪಷ್ಟ ಬಹುಮತ ಬಂದಿಲ್ಲ. ಬಿಜೆಪಿ ನಾಯಕರು ಫಲಿತಾಂಶದಿಂದ ಆತ್ಮವಲೋಕನ ಮಾಡಿಕೊಳ್ಳಬೇಕಾಗಿದೆ.  ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ತೀವ್ರ ಭಾವನಾತ್ಮಕ ವಿಚಾರಗಳನ್ನು ಪ್ರಚೋದಿಸಿ, ಸರ್ಕಾರಿ ಯಂತ್ರಗಳನ್ನು ದುರುಪಯೋಗಪಡಿಸಿಕೊಂಡು, ವ್ಯಾಪಕ ಹಣ ಖರ್ಚು ಮಾಡಿ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರು ತರೀಕೆರೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಬಂದಿದೆ. ಈ ಚುನಾವಣೆಯು ಕಾಂಗ್ರೆಸ್ ಪಕ್ಷದ ಹಿನ್ನಡೆ ಎಂದು ಹೇಳಲಾಗದು. ನಗರಪಾಲಿಕೆಯ ಹಾಗೂ ಉಪಚುನಾವಣೆಗಳ ಅಂಕಿ ಅಂಶಗಳನ್ನು ಗಮನಿಸಿದರೆ ಜಾತ್ಯತೀತ ಶಕ್ತಿಗಳು ಮೇಲುಗೈ ಸಾಧಿಸಿದೆ ಎಂದು ವ್ಯಾಖ್ಯಾನಿಸಬಹುದು. ಮುಂಬರುವ ದಿನಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವುದು ಬಹುತೇಕ ಸ್ಪಷ್ಟವಾಗಿದೆ ಎಂದು ಹೆಚ್.ಎ ವೆಂಕಟೇಶ್ ನುಡಿದರು.

Key words: mysore- city corporation-by- election-congress-won-kpcc-spokesperson-HA venkatesh

website developers in mysore