ಉದ್ಯಮಿಗಳಿಗೆ ನಷ್ಟವಾಗುತ್ತೆ ಅನ್ನೋ ಕಾರಣಕ್ಕೆ ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ : ಸಿಎಂ ಬೊಮ್ಮಾಯಿ.

Mysore-cm-covid-night-curfew-no-cancel

 

ಮೈಸೂರು, ಡಿ.26, 2021 : (www.justkannada.in news ) : ರಾಜ್ಯದಾದ್ಯಂತ ಜಾರಿಗೊಳಿಸಿರುವ ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮೈಸೂರಿಗೆ ಇಂದು ಮಧ್ಯಾಹ್ನ ಆಗಮಿಸಿದ ಸಿಎಂ, ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಹೇಳಿದಿಷ್ಟು..

ದೇಶಾದ್ಯಂತ ಓಮಿಕ್ರಾನ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಫೆಬ್ರವರಿಯಲ್ಲಿ ಕೇಸ್ ಜಾಸ್ತಿ ಆಗಬಹುದು ಅನ್ನೋದು ಅಂದಾಜು ಮಾತ್ರ. ಅದಕ್ಕೆ ಪೂರಕವಾದ ದಾಖಲೆ ಇಲ್ಲ, ಸಂಶೋಧನೆಯೂ ನಡೆದಿಲ್ಲ. ಅದಾಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ.

ರಾಜ್ಯದಾದ್ಯಂತ ನೈಟ್ ಕರ್ಪ್ಯೂ ವಿಚಾರ. ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ. ಅಕ್ಕ ಪಕ್ಕದ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ . ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಅನ್ನೋದು ಗಮನಕ್ಕೆ ಬಂದಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಕರ್ಫ್ಯೂ ನಿಯಮದಲ್ಲಿ ಬದಲಾವಣೆ ಸಾಧ್ಯವಿಲ್ಲ.

ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

 

key words : Mysore-cm-covid-night-curfew-no-cancel