ಹರ್ಷಗುಪ್ತ ನೇಮಿಸಿರೋದು ಜ್ಯಬಿಲೆಂಟ್ ಕಾರ್ಖಾನೆಯ ಕರೋನ ಮೂಲ ಪತ್ತೆಗೆ, ಸದ್ಯದಲ್ಲೇ ವರದಿ ನೀಡುವರು : ಸಚಿವ ಸೋಮಶೇಖರ್.

 

ಮೈಸೂರು, ಏ.26, 2020 : (www.justkannada.in news ) ಜ್ಯೂಬ್ಲೆಂಟ್ ಕಾರ್ಖಾನೆಯಿಂದ ಕರೋನ ಸೋಂಕು ಹರಡಲು ಮೂಲ ಕಾರಣ ಯಾವುದು ಎಂಬುದರ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು ಸದ್ಯದಲ್ಲೇ ನಿಜಾಂಶ ಬಹಿರಂಗವಾಗಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರಿನಲ್ಲಿ ಭಾನುವಾರ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಚಿವರು ಹೇಳಿದಿಷ್ಟು…

 mysore-corona-harshaguptha-oppointed-special-officer-s.t.somashekar

ಜ್ಯೂಬ್ಲೆಂಟ್ ಕಾರ್ಖಾನೆಯಿಂದ ಸೋಂಕು ತಗುಲಲು ಮೂಲ ಕಾರಣ ಯಾವುದು ಎಂಬ ಬಗ್ಗೆ ಸೂಕ್ತ ತನಿಖೆಯಾಗಲು ಅಧಿಕಾರಿಯನ್ನು ನೇಮಿಸುವಂತೆ ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಕೊರೋನಾ ಪ್ರಕರಣಕ್ಕೆ ಉಸ್ತುವಾರಿ ಅಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರು ನೇಮಿಸಿದೆ. ಇವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಸರ್ಕಾರಕ್ಕೆ ಶೀಘ್ರದಲ್ಲೇ ಜ್ಯೂಬ್ಲಿಯೆಂಟ್ ಸೋಂಕಿನ ಮೂಲವನ್ನು ಪತ್ತೆಹಚ್ಚಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಕೊರೋನಾ ಪ್ರಕರಣಗಳು ಈಗ ಕಡಿಮೆಯಾಗಿದೆ. ಸರ್ಕಾರ ಸಾಕಷ್ಟು ಬಿಗಿಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಹತೋಟಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಎಂಜಿ ರಸ್ತೆಯ ಮಾರುಕಟ್ಟೆಯನ್ನು ಸ್ಥಳಾಂತರಿಸಲಾಗಿದೆ. ಸೂಕ್ತ ವ್ಯವಸ್ಥೆಯಾದ ಮೇಲೆ ಎಲ್ಲವೂ ಸರಿಯಾಗಲಿದೆ. ಸಾರ್ವಜನಿಕರ ಸಹಕಾರದ ಅವಶ್ಯಕತೆ ಇದೆ ಎಂದು ಸಚಿವರು ಹೇಳಿದರು.

key words : mysore-corona-harshaguptha-oppointed-special-officer-s.t.somashekar