ಮೈಸೂರಿನಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಎರಡು ಬಲಿ…?

ಮೈಸೂರು,ಜು,6,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.  ಈ ನಡುವೆ ಇಂದು ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 72 ವರ್ಷ ಒಬ್ಬರು, 46 ವರ್ಷದ ಮತ್ತೊಬ್ಬರು ಸಾವನ್ನಪ್ಪಿದ್ದು, ನಿಯಮದ ಪ್ರಕಾರ ಜಿಲ್ಲಾಡಳಿತ ಅಂತ್ಯಕ್ರಿಯೆ ಮುಗಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಅಧಿಕೃತ ಘೋಷಣೆ ನೀಡುವುದೊಂದೇ ಬಾಕಿ ಇದೆ.mysore-corona-two-death

 

ಈ ಮೂಲಕ ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಕೊರೋನಾ ತಡೆಗಾಗಿ ಜಿಲ್ಲಾಡಳಿತ ಪ್ರಯತ್ನಿಸುತ್ತಿದ್ದು, ಸಂಜೆ 6 ರಿಂದ ಬೆಳಿಗ್ಗೆ 5 ಗಂಟೆವರೆಗೆ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಮಾಡಿದೆ. 

Key words: Mysore-corona-two -death