ಮೈಸೂರಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸಚಿವರ ‘ ಪಂಚ ಸೂತ್ರ’…

 

ಮೈಸೂರು, ಮೇ 10, 2020 : ( www.justkannada.in news ) ವಿಶ್ವದಾದ್ಯಂತ ಆತಂಕ ಮೂಡಿಸಿರುವ ಕೊರೊನಾ ವೈರಸ್ ಮೈಸೂರು ಜಿಲ್ಲೆಯಲ್ಲಿ ಹರಡದಂತೆ ಕಟ್ಟುನಿಟ್ಟಿನ ಕ್ರಮಹಿಸಬೇಕಾಗಿದೆ. ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಣಕ್ಕೆ ತಂದಿರುವುದು ಸಂತಸದ‌ ವಿಷಯ. ಇನ್ನು ಮುಂದೆ ಯಾರಿಗೂ ಸೋಂಕು ತಗುಲದಂತೆ ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಸಚಿವರು  ಪತ್ರ ಬರೆದು,  ಕೋವಿಡ್ ನಿಯಂತ್ರಣಕ್ಕೆ ಪಂಚ ಸೂತ್ರಗಳನ್ನು  ನೀಡಿದ್ದು ಅದು ಹೀಗಿದೆ….

1. ಹೊರ ದೇಶ-ಹೊರ ರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ 14 ದಿನಗಳು ಕ್ವಾರಂಟೈನ್ ಗೆ ಒಳಪಡಿಸಿಬೇಕು.
2. ಮಹಿಳೆಯರು ಮತ್ತು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜೊತೆಗೆ ಅವರ ಸುರಕ್ಷತೆ ಬಗ್ಗೆ ಜಾಗ್ರತೆ ವಹಿಸುವುದು.
3. ವಯೋವೃದ್ಧರಿದ್ದಲ್ಲಿ ಅವರನ್ನು ನೋಡಿಕೊಳ್ಳಲು ಪ್ರತ್ಯೇಕ ತಂಡ ರಚಿಸಿ, ವಿಶೇಷ ನಿಗಾವಹಿಸಬೇಕು.
4. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಖಾತರಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಿಬೇಕು.
5. ಈಗಾಗಲೇ ಕೆಲಸ ಶುರು ಮಾಡಿರುವ ಕಾರ್ಖಾನೆಗಳಿಗೆ ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು. ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಆಗುತ್ತಿದೆಯೇ ಎಂಬುದನ್ನು ಗಮನಿಸಬೇಕು.

mysore-covid-controle-5-points-minister-somashekar

ವಿಶ್ವವನ್ನೇ ನಡುಗಿಸುತ್ತಿರುವ ಕೊರೋನಾ ಪ್ರಕರಣ ದಿನೇ ದಿನೆ ಹೆಚ್ಚಳವಾಗುತ್ತಲೇ ಇರುವ ಸುದ್ದಿಗಳನ್ನು ನಾವು ಕೇಳುತ್ತಲೇ ಇದ್ದೇವೆ. ಆದರೆ, ಸೋಂಕಿತರ ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲಿಗೆ ಎರಡನೇ ಸ್ಥಾನದಲ್ಲಿ, ಬಳಿಕ ಮೊದಲ ಸ್ಥಾನಕ್ಕೆ ಬಂದಿದ್ದ ಮೈಸೂರು ಜಿಲ್ಲೆಯಲ್ಲಿ ಗರಿಷ್ಠ 90 ಕೊರೋನಾ ಸೋಂಕಿತ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಎಲ್ಲರಿಗೂ ತಿಳಿದಿರುವ ವಿಚಾರವೇ ಆಗಿತ್ತು. ಈಗ ಆ ಸಂಖ್ಯೆ ದಿನೇ ದಿನೆ ಕಡಿಮೆಯಾಗಿ ಕೇವಲ 4 ಪ್ರಕರಣಕ್ಕೆ ಬಂದಿದೆ. ಇದು ಇನ್ನು ವಾರದೊಳಗೆ ಶೂನ್ಯಕ್ಕೆ ಇಳಿಯುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನ ನನಗಿಲ್ಲ. ಆದರೆ, ಈ ಸಾಧನೆ ಹಿಂದೆ ನೀವು , ಜಿಲ್ಲಾಡಳಿತ. ಪೊಲೀಸ್ ಇಲಾಖೆ , ಜಿಲ್ಲಾ ಆರೋಗ್ಯಾಧಿಕಾರಿಗಳು, ನರ್ಸ್‌ಗಳು ಆಶಾಕಾರ್ಯಕರ್ತೆಯರು, ಇದ್ದಾರೆ. ಇವರೊಂದಿಗೆ ಮಾಧ್ಯಮದವರು ಸಹ ಕೊರೋನಾ ವಾರಿಯರ್ಸ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಇವರೆಲ್ಲ ದಿನದ 24 ಗಂಟೆಯೂ 24X7 ಮಾದರಿಯಲ್ಲಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಫಲವಾಗಿ ಕೊರೋನಾ ಪ್ರಕರಣ ನಿಯಂತ್ರಣಕ್ಕೆ ಬಂದಿದೆ. ಹೀಗಾಗಿ ಇವರೆಲ್ಲರನ್ನೂ ನಾನು ಅಭಿನಂದಿಸುತ್ತೇನೆ.
ಆದರೆ, ಈಗ ಲಾಕ್ ಡೌನ್ ಸಡಿಲಿಕೆ ಆಗುತ್ತಿರುವುದರಿಂದ ಮೈಸೂರು ಜಿಲ್ಲೆಗೆ ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಬರುವವರನ್ನು ಕಡ್ಡಾಯವಾಗಿ 14 ದಿನ ಕ್ವಾರಂಟೈನ್‌ನಲ್ಲಿ ಇಡತಕ್ಕದ್ದು. ಒಮ್ಮೆ ಈ ಅವಧಿ ಪೂರೈಸಿದ ಮೇಲೆ ಅವರನ್ನು ಪುನಃ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಯಾವುದೇ ಸೋಂಕು ಇಲ್ಲವೆಂದು ಖಾತ್ರಿಯಾದ ಮೇಲೆ ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮವಹಿಸಬೇಕು ಎಂದಿದ್ದಾರೆ.

key words : mysore-covid-controle-5-points-minister-somashekar