ಮೈಸೂರು ದಸರಾ ಜವಾಬ್ದಾರಿ: ಸಚಿವ ಸೋಮಣ್ಣಗೆ ಶಹಬಾಸ್ ಗಿರಿ ನೀಡಿದ ಸಿಎಂ ಬಿ.ಎಸ್ ವೈ…..

Promotion

ಮೈಸೂರು,ಅ,8,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು  ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ  ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ  ಸುತ್ತೂರು ಸ್ವಾಮೀಜಿಗಳ ಭೇಟಿಗೂ ಮೊದಲು ಮಠದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ  ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ಬಳಿಕ ಸುತ್ತೂರು ಶ್ರೀಗಳನ್ನ ಭೇಟಿಯಾಗಿ ಸಿಎಂ ಬಿಎಸ್ ವೈ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು,  ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ದಸರಾ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ಇಂದು ಮಧ್ಯಾಹ್ನ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಗಲಿದೆ. ಇಂದು ಸಂಜೆ ಮೈಸೂರಿಗೆ ರಾಜ್ಯಪಾಲರು ಆಗಮಿಸಲಿದ್ದಾರೆ. ಜಂಬೂಸವಾರಿ ಮೆರವಣಿಗೆ ವೇಳೆ ಎಲ್ಲರೂ ಶಾಂತ ರೀತಿಯಲ್ಲಿ ವರ್ತಿಸಿ ಎಂದು ಮನವಿ ಮಾಡಿದರು.

Key words: mysore dasara-2019- CM BS Yeddyurappa- visit –suttur shakamath-blessing