ಮೈಸೂರು ದಸರಾ-2020: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಪಟ್ಟಿ ಸಿದ್ಧಪಡಿಸುವಂತೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ…

Promotion

ಮೈಸೂರು,ಅಕ್ಟೋಬರ್,11,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರಾದಾಯಿಕವಾಗಿ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಮಧ್ಯೆ ದಸರಾ ಕಾರ್ಯಕ್ರಮಗಳಿಗೆ ಸೀಮಿತ ಜನರಿಗೆ ಅವಕಾಶ ನೀಡಲಾಗಿದೆ.jk-logo-justkannada-logo

ದಸರಾ ಉದ್ಘಾಟನೆ ವೇಳೆ 200 ಮಂದಿಗೆ ಹಾಗೂ ಜಂಬೂ ಸವಾರಿಗೆ 300 ಜನರು ಪಾಲ್ಗೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ದಸರಾ ಉದ್ಘಾಟನೆ, ಜಂಬೂ ಸವಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ, ಜನಪ್ರತಿನಿಧಿಗಳು, ಆಹ್ವಾನಿತರು, ಜನರು, ಅಧಿಕಾರಿಗಳು, ಮಾಧ್ಯಮ ಸಿಬ್ಬಂದಿಗಳ ಪಟ್ಟಿ ಸಿದ್ಧಪಡಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್,ಟಿ ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಪಟ್ಟಿ ಅಂತಿಮಗೊಂಡ ಬಳಿಕ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Mysore Dasara -2020- Minister -ST Somashekhar- instructed – prepare -list