ಮೈಸೂರು ದಸರಾ: ಅರಮನೆಯಂಗಳದಲ್ಲಿ ಕುಶಾಲತೋಪು ಸಿಡಿಸುವ ತಾಲೀಮು…

ಮೈಸೂರು,ಅಕ್ಟೋಬರ್,7,2020(www.justkannada.in):  ಕೊರೋನಾ ಸಂಕಷ್ಟದ ನಡುವೆ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾಚರಣೆಗೆ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು, ಅರಮನೆಯಂಗಳದಲ್ಲಿ ಕುಶಾಲತೋಪು ಸಿಡಿಸುವ ತಾಲೀಮು ಮುಂದುವರೆದಿದೆ.jk-logo-justkannada-logo

ವಿಜಯ ದಶಮಿಯಂದು ಜಂಬೂ ಸವಾರಿ ಹೊರಡುವ ಮುನ್ನ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಕುಶಾಲತೋಪು ಸಿಡಿಸಲು 7 ಫಿರಂಗಿ ಗಾಡಿಗಳ ಬಳಕೆ ಮಾಡಲಾಗುತ್ತದೆ. ಇದಕ್ಕಾಗಿ ತಾಲೀಮು ನಡೆಸಲಾಗುತ್ತಿದ್ದು, ಕುಶಾಲತೋಪು ಸಿಡಿಸುವ ವೇಳೆ ಆನೆಗಳು, ಕುದುರೆಗಳು ಬೆದರಂತೆ ನೋಡಿಕೊಳ್ಳುವುದು ತಾಲೀಮಿನ ಉದ್ದೇಶವಾಗಿದೆ. ಹೀಗಾಗಿ ಆನೆಗಳು ಕುದುರೆಗಳು ಇದಕ್ಕೆ ಹೊಂದಿಕೊಳ್ಳಲು ಮುಂಚಿತವಾಗಿ ತಾಲೀಮು  ನಡೆಸಲಾಗುತ್ತಿದೆ. mysore-dasara-2020-workout-palace

ಹೀಗಾಗಿ ಅರಮನೆಯಂಗಳದಲ್ಲಿ  ಕುಶಾಲತೋಪು ಸಿಡಿಸುವ ತಾಲೀಮು ಮುಂದುವರೆದಿದ್ದು ಇಂದು ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ ಡ್ರೈ ಪ್ರಾಕ್ಟೀಸ್ ನಲ್ಲಿ ಭಾಗಿಯಾಗಿ ತಾಲೀಮು ನಡೆಸಿದರು. ಸಿಎಆರ್‌ನ 30 ಸಿಬ್ಬಂದಿ ಕುಶಾಲತೋಪು ಡ್ರೈ ಪ್ರಾಕ್ಟೀಸ್ ನಲ್ಲಿ ಭಾಗಿಯಾಗಿದ್ದವು.

Key words: Mysore Dasara-2020-Workout -Palace