ನಾಳೆಯಿಂದ ಮೈಸೂರಿನಲ್ಲಿ ದಸರಾ ಸಂಭ್ರಮ: ಅರಮನೆ ಅಂಗಳದಲ್ಲಿ ಅಂತಿಮ ಹಂತದ ಸಿದ್ಧತಾ ಕಾರ್ಯ…

ಮೈಸೂರು,ಅಕ್ಟೋಬರ್,16,2020(www.justkannada.in):  ವಿಶ್ವ ವಿಖ್ಯಾತ  ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ಸಿಗಲಿದ್ದು ನಾಳೆಯಿಂದ ಮೈಸೂರು ಅರಮನೆ ಅಂಗಳದಲ್ಲಿ ದಸರಾ ಸಂಭ್ರಮ ಮನೆ ಮಾಡಲಿದೆ.mysore-dasara-celebration-tomorrow-final-stage-preparation-work-palace

ಕೊರೋನಾ ಭೀತಿ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿವಾಗಿ ದಸರಾ ಆಚರಣೆಗೆ ನಿರ್ಧರಿಸಲಾಗಿದ್ದು ಜಂಬೂ ಸವಾರಿ ಸಾಂಸ್ಕೃತಿಕ ಕಾರ್ಯಕ್ರಮ ಅರಮನೆ ಆವರಣಕ್ಕಷ್ಟೇ ಸೀಮಿತವಾಗಿದೆ. ಈ ನಡುವೆ ದಸರಾ ಸಂಭ್ರಮಕ್ಕೆ ಅರಮನೆ ಅಂಗಳದಲ್ಲಿ ಅಂತಿಮ ಹಂತದ ಸಿದ್ದತಾ ಕಾರ್ಯ ನಡೆಯುತ್ತಿದ್ದು, ವೇದಿಕೆ ನಿರ್ಮಾಣ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದಾರೆ.

ಪ್ರತಿದಿನ ಸಂಜೆ 7 ರಿಂದ 9 ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ‌ ನೇರ ವೀಕ್ಷಣೆಗೆ ಕೇವಲ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನಾಳೆ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದ್ದು ಹಾಗೆಯೇ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭವೂ ನಡೆಯಲಿದೆ.

ನಾಳೆ ಬೆಳಿಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ವೇಳೆ ಸಭಾಪತಿ ವಿಶ್ವೇಶ್ವರ ಕಾಗೇರಿ. ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮೇಯರ್ ತಸ್ನಿಂ ಸೇರಿದಂತೆ ವಿವಿಧ ಗಣ್ಯರು ಭಾಗಿಯಾಗಲಿದ್ದಾರೆ. ಉದ್ಘಾಟನೆ ಬಳಿಕ ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ಕಳೆಗಟ್ಟಲಿದ್ದು, ವರ್ಚ್ಯುಯಲ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ.

Key words: mysore Dasara-celebration – tomorrow- Final stage -preparation work – palace