ಮೈಸೂರು ದಸರಾ: ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ಜಂಬೂ ಸವಾರಿಗೆ ಸಿಎಂ ಬೊಮ್ಮಾಯಿ ಚಾಲನೆ

Promotion

ಮೈಸೂರು,ಅಕ್ಟೋಬರ್,15,2021(www.justkannada.in):   ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ ಚಿನ್ನದ ಅಂಬಾರಿಯಲ್ಲಿನ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಸಿಎಂ ಬಸವರಾಜ ಬೊಮ್ಮಾಯಿ ವಿಶ್ವ ವಿಖ್ಯಾತ  ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಶುಭಮೀನ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ  ಅವರು ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.

ಈ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾ.ರಿತು ರಾಜ್ ಅವಸ್ಥಿ , ಮೈಸೂರು ಮೇಯರ್ ಸುನಂದ ಪಾಲನೇತ್ರ, ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೈಸೂರು ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ,  ಉಪಸ್ಥಿತರಿದ್ದರು.

key words: mysore-dasara-cm basavaraja bommai-jamboo savari