ಮೈಸೂರು ದಸರಾ ಆಚರಣೆ: ಜಿಲ್ಲಾಡಳಿತಕ್ಕೆ ಪ್ರಮೋದಾದೇವಿ ಒಡೆಯರ್ ಎಚ್ಚರಿಕೆ….

kannada t-shirts

ಮೈಸೂರು,ಅಕ್ಟೋಬರ್,2,2020(www.justkannada.in): ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು  ಈ ಮಧ್ಯೆ ಇಂದು ಅರಮನೆಗೆ ಗಜಪಡೆ ಪ್ರವೇಶದ ಮೂಲಕ ನಾಡಹಬ್ಬದ ಸಂಭ್ರಮ ಪ್ರಾರಂಭವಾಗಿದೆ.mysore-dasara-gajapade-pramodadevi-wodeyar-warning-district-administration

ಮೈಸೂರು ಸೇರಿ ರಾಜ್ಯಾದ್ಯಂತ ಕೊರೋನಾ ಆವರಿಸಿದ್ದು ಹೀಗಾಗಿ ದಸರಾ ಆನೆಗಳ ಮಾವುತರು ಮತ್ತು ಕಾವಾಡಿಗಳ ಆರೋಗ್ಯದ ಸುರಕ್ಷತೆ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಮೈಸೂರು ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಎಚ್ಚರಿಕೆಯ ಸಲಹೆ ನೀಡಿದ್ದಾರೆ.

ಜಿಲ್ಲಾಡಳಿತ ವತಿಯಿಂದ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕರಾದ ಎಸ್.ಎ ರಾಮದಾಸ್, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಅವರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಫಲತಾಂಬೂಲ ನೀಡುವ ಮೂಲಕ ಮೈಸೂರು ದಸರಾ ಮಹೋತ್ಸವಕ್ಕೆ ಆಹ್ವಾನಿಸಿ  ನಾಡಹಬ್ಬ ಯಶಸ್ವಿಗೆ ಸಹಕಾರ ಕೋರಿದರು.mysore dasara-gajapade-Pramodadevi wodeyar- Warning-District administration

ಈ ವೇಳೆ ಮೈಸೂರು ಜಿಲ್ಲಾಡಳಿತಕ್ಕೆ ಕಿವಿಮಾತು ಹೇಳಿದ ಪ್ರಮೋದಾದೇವಿ ಒಡೆಯರ್, ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ, ಮಾವುತ ಮತ್ತು ಕಾವಾಡಿಗಳ ಆರೋಗ್ಯ ಸುರಕ್ಷತೆ ಬಗ್ಗೆ ಕ್ರಮ ವಹಿಸಬೇಕು. ಮಾವುತರ ಆರೋಗ್ಯಕ್ಕೆ  ತೊಂದರೆಯಾದರೇ ದಸರಾ ಆನೆಗಳನ್ನ ನಿಭಾಯಿಸುವುದು ಕಷ್ಟವಾಗುತ್ತದೆ. ಹೀಗಾಗಿ ಅವರ ಆರೋಗ್ಯದ ಸುರಕ್ಷತೆ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Key words:  mysore dasara-gajapade-Pramodadevi wodeyar- Warning-District administration

website developers in mysore