ಸಾಮಾಜಿಕ ಜಾಲತಾಣ, ದೂರ ದರ್ಶನದಲ್ಲಿ ಮೈಸೂರು ದಸರಾ ಜಂಬೂ ಸವಾರಿ ನೇರ ಪ್ರಸಾರ….

ಮೈಸೂರು.ಅಕ್ಟೋಬರ್,24,2020(www.justkannada.in):  ಕೋವಿಡ್-19 ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳ, ಸಾಂಪ್ರದಾಯಕ ಹಾಗೂ ವರ್ಚುಯಲ್ ಆಗಿ ಆಚರಿಸಲಾಗುತ್ತಿದ್ದು, ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಕಾರ್ಯಕ್ರಮವನ್ನು ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.jk-logo-justkannada-logo

ಸೋಮವಾರ ಮಧ್ಯಾಹ್ನ 2.59 ರಿಂದ 3.20 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ಧ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಮಧ್ಯಾಹ್ನ 3.40 ರಿಂದ 4.15 ಗಂಟೆಯವರೆಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ನೆರವೇರಲಿದೆ.mysore-dasara-jumbo-ride-live-social-media-doora-darshan

ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್‍ಬುಕ್ ಪೇಜ್ ಲಿಂಕ್ https://www.facebook.com/mysorevarthe/  ಹಾಗೂ ಯೂಟೂಬ್ ಲಿಂಕ್ https://www.youtube.com/playlist?list=PLvhg-sbsHV_ybFvK6Iu7HLoaOmh3yCcVC ನಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಮನೆಯಲ್ಲೆ ಕುಳಿತು ವೀಕ್ಷಿಸಬಹುದು ಎಂದು  ಡಿಸಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

Key words: Mysore dasara-Jumbo ride -live – social media-doora darshan