ಮೈಸೂರು ದಸರಾ: ಅರಮನೆ ಧಾರ್ಮಿಕ ಕಾರ್ಯಕ್ರಮಗಳ ಪಟ್ಟಿ ಸಿದ್ಧ

ಮೈಸೂರು, ಅಕ್ಟೊಬರ್,09,2020 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಅರಮನೆ ಪಾರಂಪರಿಕ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧವಾಗಿದೆ.

ಅ‌ಕ್ಟೋಬರ್ 17 ಬೆಳಗ್ಗೆ 6.15 ರಿಂದ 6.30ರ ಶುಭ ಮಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಕಾರ್ಯ ನಡೆಯಲಿದೆ. 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಕಂಕಣಧಾರಣೆ ನಡೆಯಲಿದೆ.

ಯದುವಂಶದ ರಾಜವಂಶಸ್ಥ ಯದಯವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಕಂಕಣಧಾರಣೆ ಮಾಡಿದ ಬಳಿಕ ಬೆಳಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ.

ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಕೊರೊನಾ ಕಾರಣಕ್ಕೆ ಖಾಸಗಿ ದರ್ಬಾರ್ ಗೆ ಮಾದ್ಯಮಗಳಿಗೂ ನಿರ್ಭಂದ ಹೇರಲಾಗಿದೆ. ಅ.21 ರಂದು ಬೆಳಗ್ಗೆ 9.45ಕ್ಕೆ ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಕ್ಟೋಬರ್ 25ಕ್ಕೆ ಚಂಡಿ ಹೋಮದಲ್ಲಿ ಪಾಲ್ಗೊಳ್ಳಬಹುದು.

ಆಯುಧಗಳಿಗೆ ಪಟ್ಟದ ಆನೆ ಕುದುರೆ ಹಸು ವಾಹನಗಳಿಗೆ ಪೂಜೆ ನಡೆಯಲಿದೆ. ಅ‌ 26ರಂದು ವಿಜಯದಶಮಿ ಮೆರವಣಿಗೆ ನಡೆಯಲಿದೆ. ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದಲ್ಲಿ ಬನ್ನಿ ಮರಕ್ಕೆ ಪೂಜೆಯನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ನೆರವೇರಿಸಲಿದ್ದಾರೆ.