ದಸರಾ ಆಚರಣೆಗೆ ಸಕಲ ಸಿದ್ಧತೆ: ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮ- ಮೈಸೂರು ಡಿಸಿ ರೋಹಿಣಿ ಸಿಂಧೂರಿ…

kannada t-shirts

ಮೈಸೂರು, ಅಕ್ಟೋಬರ್,1,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.jk-logo-justkannada-logo

ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಯಣ ಆರಂಭಕ್ಕೆ ಗುರುವಾರ ಹುಣಸೂರಿನ ವೀರನಹೊಸಹಳ್ಳಿಯಲ್ಲಿಯನ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್‌ನಿಂದ ಚಾಲನೆ ನೀಡಲಾಯಿತು. ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಿಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೋವಿಡ್ ಹಿನ್ನೆಲೆ ಈ ಬಾರಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.mysore-dc-rohini-sindhuri-preparation-dasara-celebration

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಅಲೆಗ್ಸಾಂಡರ್, ಮಹೇಶ್‌ಕುಮಾರ್, ಡಾ.ಕೆ.ಸಿ.ಪ್ರಶಾಂತ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಅಂಟೋನಿ ಪೌಲ್ ಇನ್ನಿತರರು ಉಪಸ್ಥಿತರಿದ್ದರು.

Key words: Mysore DC- Rohini Sindhuri- preparation –dasara celebration

website developers in mysore