ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಗ್ರಾಮದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…..

ಮೈಸೂರು, ಫೆಬ್ರವರಿ, 21,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿಯ ತರಿಕಲ್ಲು ಗ್ರಾಮದಲ್ಲಿ ವಾಸ್ತವ್ಯ ಹೂಡಿ ಕುಂದು ಕೊರತೆಗಳನ್ನ ಆಲಿಸಿದ್ಧ ಮೈಸೂರು ಜಿಲ್ಲಾದಿಕಾರಿ ರೋಹಿಣಿ ಸಿಂಧೂರಿ ಅವರು ಗ್ರಾಮದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ.jk

ಗ್ರಾಮ ವಾಸ್ತವ್ಯದಲ್ಲಿ ಬಂದ 685ರ ಪೈಕಿ 625 ಅರ್ಜಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪರಿಹಾರ ಒದಗಿಸಿದ್ದಾರೆ.  ಡಿಸಿ ರೋಹಿಣಿ ಸಿಂಧೂರಿ ಅವರು ನಿನ್ನೆ ತರಿಕಲ್ಲು ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮದಲ್ಲಿನ ಸಮಸ್ಯೆ ಆಲಿಸಿ ಗ್ರಾಮಸ್ಥರ ವಸತಿ, ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಬಗೆಹರಿಸುವ ಭರವಸೆ ನೀಡಿದ್ದರು. Mysore- DC -Rohini Sindhuri- solved -problems - village.

ಇನ್ನು ಗ್ರಾಮ ವಾಸ್ತವ್ಯದಲ್ಲಿ ವಿದ್ಯಾರ್ಥಿಗಳೊಂದಿಗೆ ಬೆರೆತು ಸಂವಾದ ನಡೆಸಿದ ಡಿಸಿ ರೋಹಿಣಿ ಸಿಂಧೂರಿ ಅವರು, ಶಾಲಾ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ವಿದ್ಯಾರ್ಥಿಗಳಿಗೆ ಸಾಧನೆ ಹಾದಿಯ ಪಾಠ ಮಾಡಿದರು. ಹಾಗೆಯೇ ಗ್ರಾಮದ ಉಳಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Key words: Mysore- DC -Rohini Sindhuri- solved -problems – village.