ಸಚಿವದ್ವಯರ ಉಪಸ್ಥಿತಿಯಲ್ಲಿ ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಣೆ.  

Promotion

ಮೈಸೂರು, ಜೂನ್ 16,2021(www.justkannada.in):  ಚಲನಚಿತ್ರ ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಂದ ಕೃಷಿ ಸಚಿವ ಬಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ ಆಹಾರ ಕಿಟ್ ವಿತರಣೆ ಮಾಡಿ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.jk

ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 520 ಆಹಾರ ಕಿಟ್‌ ಗಳನ್ನು ನೀಡಿದ್ದು, ಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ 400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಫಣೀಶ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಡಿಸಿಪಿ ಗೀತಾ ಪ್ರಸನ್ನ, ರಂಗಕರ್ಮಿಗಳಾದ ಬಸವಲಿಂಗಯ್ಯ, ಮಂಡ್ಯ ರಮೇಶ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Key words: mysore- Distribution – Food Kit –Artists-ministers-ST Somashekar-BC Patil