ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ.

Promotion

ಮೈಸೂರು,ಜೂನ್,5,2021(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ  ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.jk

ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಯಿತು. ಉಸ್ತುವಾರಿ ಹೊಣೆ ನಿಭಾಯಿಸುವಲ್ಲಿ ಎಸ್.ಟಿ ಸೋಮಶೇಖರ್ ಸಂಪೂರ್ಣ ವಿಫಲವಾಗಿದ್ದಾರೆಂದು ಆರೋಪಿಸಿದ ಪ್ರತಿಭಟನಾನಿರತ ಕಾಂಗ್ರೆಸ್  ಮುಖಂಡರು, ಸಚಿವ ಎಸ್.ಟಿ ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ವಾಸು, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.

Key words: Mysore District – in charge -Minister – ST Somashekhar- Resigns-congress -protest