ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿ….

ಮೈಸೂರು,ಜು,30,2019(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಎಚ್.ಡಿ.ಕೋಟೆ ತಾಲೂಕಿನ ಕೋಡಿ ಅರಳಿಮರದ ಬಳಿ ಈ ಘಟನೆ  ನಡೆದಿದೆ.ಸದ್ಯ ಬಸ್‌ನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಮೈಸೂರಿನಿಂದ ಮಾನಂದವಾಡಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ  ಕೆರೆಯ ಹಳ್ಳಕ್ಕೆ  ಉರುಳಿ ಬಿದ್ದಿದೆ.

ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಬೆಳ್ಳಂಬೆಳಗ್ಗೆ ಈ ಘಟನೆ ಸಂಭವಿಸಿದ್ದು  ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Mysore- Driver – control -government bus-overturn