Monday, October 5, 2026

BDA Apartments

ಅಂಧ ಗಾಯಕಿಯರಿಗೆ ಮನೆ ನಿರ್ಮಿಸಿಕೊಟ್ಟ ನಟ ಜಗ್ಗೇಶ್ BDA JK_Adv BDA Adv
Home Front Page ಮೈಸೂರು ದಸರಾ: ಏರ್ ಶೋಗೆ ಕೇಂದ್ರದ ಗ್ರೀನ್ ಸಿಗ್ನಲ್ !

ಮೈಸೂರು ದಸರಾ: ಏರ್ ಶೋಗೆ ಕೇಂದ್ರದ ಗ್ರೀನ್ ಸಿಗ್ನಲ್ !

ಮೈಸೂರು, ಅಕ್ಟೋಬರ್ 06, 2023 (www.justkannada.in): ಈ ಬಾರಿಯ ಮೈಸೂರು ದಸರಾ ವೇಳೆ ಪ್ರವಾಸಿಗರು ಹಾಗೂ ಮೈಸೂರಿಗರು ಏರ್ ಕಣ್ತುಂಬಿಕೊಳ್ಳಬಹುದಾಗಿದೆ!

ಹೌದು. ಮೈಸೂರು ದಸರಾ ಏರ್ ಶೋ ಆಯೋಜನೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು,  ಜಿಲ್ಲಾಧಿಕಾರಿಗಳು ಇಂದು ಸ್ಧಳ ಪರಿಶೀಲನೆ ನಡೆಸಿದರು.

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.  ಈ ಸಂಬಂಧ ಏರ್ ಶೋ ನಡೆಸಲು  ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ  ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.