ಕ್ರೀಡಾಕೂಟದಲ್ಲಿ ” ಕಿರಿಕ್ ಪಾರ್ಟಿ” :  ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಣೆ….

Promotion

ಮೈಸೂರು,ಮಾ,3,2020(www.justkannada.in):  ಮೈಸೂರಿನ ಎಂಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರೀಡಾಕೂಟ ಸಂದರ್ಭದ ವೇಳೆ ವಿದ್ಯಾರ್ಥಿಗಳ ಮಧ್ಯೆ ಗಲಾಟೆಯಾಗಿರುವ ಘಟನೆ ನಡೆದಿದೆ.

ಮೈಸೂರು-ನಂಜನಗೂಡು ರಸ್ತೆಯ ತಾಂಡವಪುರ ಬಳಿ ಇರುವ ಎಂಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.  ಕಂಪ್ಯೂಟರ್ ಸೈನ್ಸ್ ಮತ್ತು  ಸಿವಿಲ್ ವಿಭಾಗದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಶುರುವಾಗಿತ್ತು.mysore-engineering-college-student-declaration-leave

ಈ ವೇಳೆ ವಿದ್ಯಾರ್ಥಿಗಳು ತರಗತಿ ಮತ್ತು ಕ್ರೀಡಾಕೂಟ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದು, ವಿಚಾರ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು. ಪರಿಸ್ಥಿತಿ ತಿಳಿಗೊಳಿಸಲು ಇಂದು ಮತ್ತು ನಾಳೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಯಿತು.

Key words:mysore- Engineering College –student-  Declaration -leave