ಮೈಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು…

Promotion

ಮೈಸೂರು,ಫೆ,4,2020(www.justkannada.in): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮೈಲಾಂಬೂರು ಗ್ರಾಮದ ರೈತ ಸೂರೇಗೌಡ (55)  ಪಟ್ಟವರು. ರೈತ ಸೂರೇಗೌಡ ಪಿರಿಯಾಪಟ್ಟಣದ ಕಾವೇರಿ ಗ್ರಾಮೀಣ ಬ್ಯಾಂಕ್‌ನಲ್ಲಿ 3 ಲಕ್ಷ ಸಾಲ ಮಾಡಿದ್ದರು. ಎಲ್ಲಾ ಹಣವನ್ನು ಕೃಷಿಗಾಗಿ ಬಳಸಿದ್ದರು.

ಆದರೆ ಬೆಳೆ ಕೈ ಕೊಟ್ಟ ಹಿನ್ನೆಲೆ ರೈತ ಸೂರೇಗೌಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mysore- farmer- commits –suicide