ಬಂಡೀಪುರದಲ್ಲಿ ಬೆಂಕಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮ:  ಬೆಳಗಾವಿ ಇಂದು ಮತ್ತು ನಾಳೆಯೂ ನಮ್ಮದೆ ಎಂದ್ರು ಸಚಿವ ಸಿ.ಸಿ ಪಾಟೀಲ್ …

Promotion

ಮೈಸೂರು,ಜ,1,2019(www.justkannada.in):  ಕಳೆದ ವರ್ಷ ಬಂಡೀಪುರದಲ್ಲಿ ಬೆಂಕಿ ಅವಘಡ ವಿಚಾರ ಸಂಬಂಧ ಈ ಬಾರಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಾರಿ ವಿಶೇಷ ಸೇನಾ  ಹೆಲಿಕಾಪ್ಟರ್ ಬಳಸಲು ಚಿಂತಿಸಲಾಗಿದೆ ಎಂದು ಅರಣ್ಯ ಸಚಿವ ಸಿ.ಸಿ ಪಾಟೀಲ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಸಿ.ಸಿ ಪಾಟೀಲ್, ಕಳೆದ ವರ್ಷ ಬಂಡೀಪುರದಲ್ಲಿ ಬೆಂಕಿ ಅವಘಡ ವಿಚಾರ ಈ ಬಾರಿ ವಿಶೇಷ ಸೇನಾ  ಹೆಲಿಕಾಪ್ಟರ್ ಬಳಸಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಹೆಚ್ಚು ಹಣ ಖರ್ಚಾಗಲ್ಲ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೆವೆ. ಕಳೆದ ಬಾರಿ ಬೆಂಕಿ ರೇಖೆ ನಿರ್ಮಾಣವಾಗದೆ ಅವಘಡ ಸಂಭವಿಸಿತ್ತು. ಆದ್ರೆ ಈ ಬಾರಿ ಸಂಪೂರ್ಣ ಬೆಂಕಿ ರೇಖೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಮಾನವ ಮತ್ತು ವನ್ಯಜೀವಿ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ಇದನ್ನು ತಪ್ಪಿಸಲು 100 ಕೋಟಿ ವೆಚ್ಚದಲ್ಲಿ ಆನೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತೆ. ಕಾಡಂಚಿನ ಪ್ರದೇಶಲ್ಲಿ ಆನೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ. ರೈಲ್ವೆ ಕಂಬಿಗಳು, ಸೋಲಾರ್ ಫೆನ್ಸ್ ಹಾಗೂ ಕಂದಗಳ ಮೂಲಕ ತಡೆಗೋಡೆ ನಿರ್ಮಾಣ ಮಾಡಲಸಗುವುದು. ಮೊದಲ ಹಂತದಲ್ಲಿ ಸಂಘರ್ಷ ಇರುವ ಕಡೆ ಮಾಡಲಾಗುತ್ತೆ‌. ನಂತರ ಉಳಿದಂತ ಸ್ಥಳಗಳಲ್ಲಿ ನಿರ್ಮಾಣ ಮಾಡಲಾಗುವುದು‌ ಎಂದು ಮಾಹಿತಿ ನೀಡಿದರು.

ಅರಣ್ಯ ಸಿಬ್ಬಂಧಿಗಳಿಗೆ ಸಿಎಂ ಮೆಡಲ್ ನೀಡದ ವಿಚಾರ ನನ್ನ ಗಮನಕ್ಕೆ ಬಂದಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಗಮನಿಸಲು ಸಾಧ್ಯವಾಗಿರಲಿಲ್ಲ. ಆದಷ್ಟು ಬೇಗ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕ ನಿಗದಿ ಪಡಿಸುತ್ತೇನೆ ಎಂದು ಸಚಿವ ಸಿಸಿ ಪಾಟೀಲ್  ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ‌ ಕುರಿತು ಪ್ರತಿಕ್ರಿಯಿಸಿದ ಸಿ.ಸಿ ಪಾಟೀಲ್,  ಇದು ಸಿಎಂಗೆ ಬಿಟ್ಟ ವಿಚಾರ. ನಾನು ಇದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಇನ್ನು ಡಿಸಿಎಂ ಹುದ್ದೆ ಬೇಕು ಬೇಡ ಎನ್ನುವ ವಿಚಾರಕ್ಕೂ ಪ್ರತಿಕ್ರಿಯೆ ನೀಡಲ್ಲ. ಕೆಲವು ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.

ಬೆಳಗಾವಿ ಇಂದು ಮತ್ತು ನಾಳೆಯೂ ನಮ್ಮದೆ…

ಮಹರಾಷ್ಟ್ರದಿಂದ ಗಡಿ ಖ್ಯಾತೆ ಕುರಿತು ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ಬೆಳಗಾವಿ ಇಂದು ಮತ್ತು ನಾಳೆಯೂ ನಮ್ಮದೆ. ಠಾಕ್ರೆ ನೂತನವಾಗಿ ಸಿಎಂ ಆಗಿದ್ದಾರೆ. ಅವರು ಓಲೈಕೆ ಮಾಡಲು ಯತ್ನಿಸುತ್ತಿದ್ದಾರೆ. ಆದ್ರೆ ಈ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ ಎಂದರು.

key words: mysore- forest minister-C.C patil- fire – Bandipur