ರಾಜಕೀಯ ಪುನರ್ ಜನ್ಮಕೊಟ್ಟೆ ಎಂಬ ಹೆಚ್.ಡಿ.ಕೆ ಹೇಳಿಕೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು.

Promotion

ಮೈಸೂರು,ನವೆಂಬರ್,14,2022(www.justkannada.in):  ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ರು. ಕುಮಾರಸ್ವಾಮಿ ರಾಜಕೀಯಕ್ಕೆ ಬಂದಿದ್ದು ಯಾವಾಗ. 1996 ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರು. ನಾನು ಅಷ್ಟೊತ್ತಿಗೆ ಚುನಾವಣೆ ಗೆದ್ದಿರಲಿಲ್ವಾ. ನಾನು ಹೋಗದ ಕಾರಣ ಸಿದ್ದರಾಮಯ್ಯ ಗೆದ್ದರು ಎಂಬ ಮಾತುಗಳಲ್ಲಿ ಅರ್ಥ ಇಲ್ಲಾ. ಮತ ಹಾಕಿದ ಮತದಾರರಿಗೆ ಮಾಡಿದ ಅವಮಾನವಿದು ಎಂದು ಕಿಡಿಕಾರಿದರು.

ತಮ್ಮ ಸ್ಪರ್ಧೆ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಿದ್ಧರಾಮಯ್ಯ, ಎಲ್ಲಿ ಬೇಕಾದರೂ ನಿಲ್ಲುವವನು ನಾಯಕ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶ ಇದೆ.  ಜನ ಬಯಸಿದ ಕಡೆ ಸ್ಪರ್ಧೆ ಮಾಡುತ್ತೇನೆ.  ಕೋಲಾರದವರು ಬಯಸಿದರೆ ಕೋಲಾರ, ವರುಣದವರು ಬಯಸಿದರೆ ವರುಣದಲ್ಲಿ ಸ್ಪರ್ಧಿಸುತ್ತೇನೆ ಎಂದರು.

ಶಾಸಕ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ‍್ಧರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ.  ಕೇಂದ್ರ ಸರ್ಕಾರವೇ ಇದರ ಪರವಾಗಿ ಇದೆ. ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಇವರೆಲ್ಲ ಇದರ ಭಾಗ. ಸಂವಿಧಾನದ 19ನೇ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ.  ಭಯ ಹುಟ್ಟಿಸುವ ಮೂಲಕ ಬಿಜೆಪಿಯವರು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: mysore- Former CM- Siddaramaiah – HD Kumaraswamy – statement.