ತಟಸ್ಥ ನಿಲುವಿನ ಬಗ್ಗೆ ಸ್ಪಷ್ಟನೆ: ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ನನ್ನ ಮಾತು ನಡೆಯಲಿಲ್ಲ: ಈಗ ನಡೆಯಲು ಸಾಧ್ಯವೇ..? ಎಂದ ಮಾಜಿ ಸಚಿವ ಜಿ.ಟಿ ದೇವೇಗೌಡ….

ಮೈಸೂರು,ಜ,7,2020(www.justkannada.in):  ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೇ ನನ್ನ ಮಾತು ನಡೆಯಲಿಲ್ಲ. ಈಗ ನಡೆಯಲು ಸಾಧ್ಯವೇ. ಸಾರಾ ಮಹೇಶ್ ಯಾರು ಹೇಳುತ್ತಾರೋ ಅವರು ಮೇಯರ್ ಆಗುತ್ತಾರೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಜಿ.ಟಿ ದೇವೇಗೌಡರು,  ಅಬ್ಬರಿಸಿ ಬೊಬ್ಬರಿಸಿದರಷ್ಟೇ ರಾಜಕಾರಣ ಅಲ್ಲ.  ನಾನು ಮಾತಾನಾಡದೆ ಇರುವವರ ಜೊತೆ ರಾಜಕಾರಣ ಮಾಡಿದ್ದೇನೆ. ಹಾಗಾಗಿ ನಾನೂ ಮಾತಾನಾಡದೆಯೇ ರಾಜಕಾರಣ ಮಾಡುತ್ತೇನೆ. ನನ್ನದು ಈಗ ಸೈಲೆಂಟ್ ಪಾಲಿಟಿಕ್ಸ್ ಎನ್ನುವ ಮೂಲಕ ಹುಣಸೂರು ಬೈ ಎಲೆಕ್ಷನ್ ಹಾಗೂ ಮೇಯರ್ ಚುನಾವಣೆ ವಿಚಾರದಲ್ಲಿ ತಟಸ್ಥ ನಿಲುವಿಗೆ ಸ್ಪಷ್ಟನೆ ನೀಡಿದರು.

ಸಾರಾ ಮಹೇಶ್ ಯಾರು ಹೇಳುತ್ತಾರೋ ಅವರು ಮೇಯರ್ ಆಗುತ್ತಾರೆ…

ಎಲ್ಲವನ್ನು ಸಾರಾ ಮಹೇಶನೇ ನೋಡಿಕೊಳ್ಳುತ್ತಿದ್ದಾನೆ.  ಪಕ್ಷದ ಸಭೆ ಕರೆದಾಗಲು ನನ್ನನ್ನು ಆಹ್ವಾನ ಮಾಡಿರಲಿಲ್ಲ. ಕುಮಾರಸ್ವಾಮಿ ಸಾರಾ ಮಹೇಶ್‌ಗೆ ಎಲ್ಲವನ್ನು ಬಿಟ್ಟುಕೊಟ್ಟಿದ್ದಾರೆ.  ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ನನ್ನ ಮಾತು ನಡೆಯಲಿಲ್ಲ.  ಈಗ ನಡೆಯಲು ಸಾಧ್ಯವೇ..? ಎಂದು ಪ್ರಶ್ನಿಸಿದ ಜಿಟಿ ದೇವೇಗೌಡ, ಸಾರಾ ಮಹೇಶ್ ಯಾರು ಹೇಳುತ್ತಾರೋ ಅವರು ಮೇಯರ್ ಆಗುತ್ತಾರೆ. ಅವರು ಯಾರ ಜೊತೆ ಮೈತ್ರಿ ಅನ್ನುತ್ತಾರೋ ಅವರ ಜೊತೆ ಮೈತ್ರಿ ನಡೆಯುತ್ತದೆ. ನನ್ನದೇನಿದ್ದರು, ಜೆಡಿಎಸ್ ಮೇಯರ್ ಅಭ್ಯರ್ಥಿಗೆ ಮತ ಚಲಾಯಿಸುವುದು ಮಾತ್ರ ಎಂದರು.

ಈಗ ಯಾರ್ರೀ ಬಿಜೆಪಿ ಬಿಟ್ಟು ಹೋಗ್ತಾರೆ..?

15 ಬಿಜೆಪಿ ಶಾಸಕರು ಹೊರಗೆ ಬರ್ತಾರೆಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡರು, 15ಮಂದಿ ಹೋಗಲ್ಲ, ಹೋಗಲ್ಲ ಅಂತಾನೆ ಬಿಜೆಪಿಗೆ ಹೋದ್ರು. ಈಗ ಯಾರ್ರೀ ಬಿಜೆಪಿ ಬಿಟ್ಟು ಹೋಗ್ತಾರೆ..?  ಅಧಿಕಾರ ಇದೆ, ಸುಭದ್ರ ಸರ್ಕಾರ ಇದೆ.  ಹೋಗೋದಾದ್ರೆ ಮೂರು ವರ್ಷದ ನಂತರ ಹೋಗ್ತಾರೆ.  ಅದು ಏನಾದರೂ ಸರಿಯಾದ ಹೊಂದಾಣಿಕೆ ಇಲ್ಲವಾದ್ರೆ ಮಾತ್ರ.  ಮಂತ್ರಿ ಆಗಬೇಕು ಎಂದು ಹೋದವ್ರು ಮತ್ತೇ ಯಾಕೆ ಬರ್ತಾರೆ..? ಯಾರು ಕೂಡ ಬಿಜೆಪಿಯಿಂದ ಬರೋದಿಲ್ಲ ಎಂದಿದ್ದಾರೆ ಎಂದು ಹೇಳಿದರು.
key words: mysore- Former minister -GT Deve Gowda- possible –sa.ra Mahesh- former cm- hd kumaraswamy