ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಇಂದು ಆರೋಪಿಗಳ ಪೋಲಿಸ್ ಕಸ್ಟಡಿ ಅಂತ್ಯ.

Promotion

ಮೈಸೂರು,ಸೆಪ್ಟಂಬರ್,7,2021(www.justkannada.in):   ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರು ಆರೋಪಿಗಳನ್ನ 3ನೇ ಜೆಎಂಎಫ್ ಸಿ ನ್ಯಾಯಾಲಯ 10ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿತ್ತು. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ಥಳ ಮಹಜರು ಸೇರಿ ಕೃತ್ಯದ ಬಗ್ಗೆ ಪೊಲೀಸರು ಬಾಯಿ ಬಿಡಿಸಿದ್ದರು.

ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಆರು ಆರೋಪಿಗಳನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಪ್ರಕರಣ ಸಂಬಂಧ ಬಂಧಿತರ ಹೇಳಿಕೆ ಮೇರೆಗೆ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ನಡುವೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಲ್ಲ.  ಆಗಸ್ಟ್ 24ರ ಸಂಜೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.

Key words: Mysore -gang rape- case- Today – end – police custody – accused.