ಹುಣಸೂರಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ….

Promotion

ಮೈಸೂರು,ಮೇ,30,2020(www.justkannada.in):  ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ   ಸಗಣಿ ಎರಚಿ ಅಪಮಾನವೆಸಗಿರುವ ಘಟನೆ ನಡೆದಿದೆ.

ಹುಣಸೂರಿನ ಬನ್ನಿಬೀದಿ ಸರ್ಕಲ್ ನಲ್ಲಿ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಯಾರೋ ಕಿಡಿಗೇಡಿಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಪರಾರಿಯಾಗಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಸುಂದರ್ ರಾಜ್ ಸೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.mysore- hunsur- Insult –B.R Ambedkar- arrest - mischief.

ಕೃತ್ಯವೆಸಗಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ದಲಿತ ಸಂಘಟನೆ ಮುಖಂಡರು ಆಗ್ರಹಿಸಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Key words: mysore- hunsur- Insult –B.R Ambedkar- arrest – mischief.